ಉತ್ತರಾಖಂಡ: ಉತ್ತರಾಖಂಡದ (Uttarakhand) ಭೀಮತಾಲ್‌ನಿಂದ ಹಲ್ದ್ವಾನಿಗೆ ತೆರಳುತ್ತಿದ್ದ ಬಸ್ 1500 ಅಡಿ ಆಳದ ಕಮರಿಗೆ ಉರುಳಿ ಬಿದ್ದ ಪರಿಣಾಮ ಮೂವರು ಸಾವಿಗೀಡಾಗಿದ್ದು, 24 ಮಂದಿ ಗಾಯಗೊಂಡಿದ್ದಾರೆ.
Uttarakhand | A team of SDRF team is carrying out a rescue operation at Bhimtal bus accident site along with local police, local people and Fire Department pic.twitter.com/Adlbmb4F9E
— ANI (@ANI) December 25, 2024
ನೈನಿತಾಲ್ ಜಿಲ್ಲೆಯ ಭೀಮತಾಲ್‌ನ (Bhimtal) ಅಮ್ದಾಲಿ ಬಳಿ ಅಪಘಾತ ಸಂಭವಿಸಿದೆ. ಪೊಲೀಸರು ಮತ್ತು ಸ್ಥಳೀಯ ರಕ್ಷಣಾ ತಂಡಗಳು ಪರಿಹಾರ ಕಾರ್ಯಾಚರಣೆ ನಡೆಸುತ್ತಿವೆ. ನೈನಿತಾಲ್‌ನಿಂದ ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಹಲ್ದ್ವಾನಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಬಗ್ಗೆ ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಆಡಳಿತ ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.