ಇಂದೇ ಗೃಹಲಕ್ಷ್ಮಿ ಹಣ ಬರುವ ನಿರೀಕ್ಷೆಯಲ್ಲಿ ರಾಯಚೂರಿನ 3,64,059 ಫಲಾನುಭವಿಗಳು

Public TV
1 Min Read
Gruhalakshmi 1

ರಾಯಚೂರು: ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ (Gruhalakshmi) ಚಾಲನೆಗೆ ರಾಯಚೂರಿನಲ್ಲಿ (Raichur) ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ರಾಯಚೂರು ಜಿಲ್ಲೆಯಾದ್ಯಂತ ಗ್ರಾ.ಪಂ, ಪಟ್ಟಣ ಪಂಚಾಯ್ತಿ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಯಚೂರು ತಾಲೂಕಿನ ದೇವಸುಗೂರು ಗ್ರಾಮದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದ್ದು, ಎರಡು ಸಾವಿರ ಫಲಾನುಭವಿಗಳು ಸೇರುವ ನಿರೀಕ್ಷೆಯಿದೆ.

gruhalakshmi 2

 

ಜಿಲ್ಲೆಯಲ್ಲಿ ಇದುವರೆಗೆ 3,65,145 ಅರ್ಜಿಗಳು ನೋಂದಣಿಯಾಗಿವೆ. ಇದರಲ್ಲಿ 3,64,059 ಅರ್ಜಿಗಳು ಗೃಹಲಕ್ಷ್ಮಿ ಯೋಜನೆಗೆ ಮಂಜೂರಾಗಿವೆ. ಫಲಾನುಭವಿಗಳು ಇಂದೇ ತಮ್ಮ ಖಾತೆಗೆ ಹಣ ಬರುವ ನಿರೀಕ್ಷೆಯಲ್ಲಿದ್ದಾರೆ. ಇನ್ನು ದೇವಸುಗೂರು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಜೊತೆ ವೀಡಿಯೊ ಸಂವಾದದಲ್ಲಿ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಚಾಲನೆಗೆ ಮೈಸೂರನ್ನೇ ಆಯ್ಕೆ ಮಾಡಿದ್ದು ಯಾಕೆ – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

ನಗರದ ಬ್ಲಡ್ ಬ್ಯಾಂಕ್, ಕನ್ನಡ ಭವನ ಸೇರಿ ವಿವಿಧೆಡೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿದೆ. ಕಾರ್ಯಕ್ರಮ ಚಾಲನೆಗೆ ರಂಗೋಲಿ ಬಿಡಿಸಿ, ತಳಿರು ತೋರಣ ಕಟ್ಟಿ ಸಿಂಗಾರ ಮಾಡಲಾಗಿದೆ. ಗೃಹಲಕ್ಷ್ಮಿ ಚಾಲನೆ ಕಾರ್ಯಕ್ರಮ ವೀಕ್ಷಿಸಲು ಎಲ್‌ಇಡಿ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆಯಿದೆ. ಇದನ್ನೂ ಓದಿ: ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ: ಡಿಕೆಶಿ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article