ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಶೋಪಿಯಾನ್ (Shopian) ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ (Terrorists) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (LeT) ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಷೇಧಿತ ಭಯೋತ್ಪಾದನಾ ಸಂಘಟನೆ ಎಲ್‌ಇಟಿಯ 3 ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ. ಅವರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆ ಮುಂದುವರಿಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ ಭದ್ರತಾ ಪಡೆಗಳು ಶೋಪಿಯಾನ್ ಝೈನಾಪೋರಾ ಪ್ರದೇಶದ ಮುಂಜ್ ಮಾರ್ಗ್ನಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು ಶೋಧಕಾರ್ಯಕ್ಕೆ ತೆರಳಿದ್ದಾರೆ. ಈ ವೇಳೆ ಭಯೋತ್ಪಾದಕರು ಸಿಕ್ಕಿಬಿದ್ದಿದ್ದು, ಗುಂಡಿನ ಚಕಮಕಿ ಪ್ರಾರಂಭವಾಗಿದೆ. ಇದನ್ನೂ ಓದಿ: ಚುನಾವಣೆಗೆ ಸಮೀಪದಲ್ಲಿ ಡಿಕೆಶಿಗೆ ಶಾಕ್ – 5 ವರ್ಷದಲ್ಲಿ ಎಷ್ಟು ಆಸ್ತಿ ಹೆಚ್ಚಾಗಿತ್ತು? ತನಿಖೆ ಎಲ್ಲಿಯವರೆಗೆ ಬಂದಿದೆ?
ಹತರಾಗಿರುವ ಮೂವರು ಭಯೋತ್ಪಾದಕರಲ್ಲಿ ಇದೀಗ ಇಬ್ಬರ ಗುರುತು ಪತ್ತೆಹಚ್ಚಲಾಗಿದೆ. ಅದರಲ್ಲೊಬ್ಬ ಕಾಶ್ಮೀರ ಪಂಡಿತ್ ಪುರಾಣ ಕೃಷ್ಣ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಲತೀಫ್ ಲೋನ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ನೇಪಾಳದ ಟಿಲ್ ಬಹದ್ದೂರ್ ಥಾಪಾ ಹತ್ಯೆಯಲ್ಲಿ ಭಾಗಿಯಾಗಿದ್ದ ಉಮರ್ ನಜೀರ್ ಎಂದು ಗುರುತಿಸಲಾಗಿದೆ.
ಉಗ್ರರಿಂದ 1 ಎಕೆ 47 ರೈಫಲ್ ಹಾಗೂ 2 ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ ಟಿಕೆಟ್ ಫೈಟ್ – ಅಂತರ ಕಾಯ್ದುಕೊಂಡ ಹಾಲಿ ಶಾಸಕರು