LatestMain PostNational

ಮದ್ಯದ ಬಾಟಲಿ ಹಿಡಿದು ಪೋಸ್ – ಮೂವರು ಅಧಿಕಾರಿಗಳು ಅಮಾನತು

Advertisements

– ಫೋಟೋ ವೈರಲ್ ಆಗಿ ಕೆಲಸಕ್ಕೆ ಕುತ್ತು

ಭೋಪಾಲ್: ಮದ್ಯದ ಬಾಟಲಿ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದ ಮಧ್ಯಪ್ರದೇಶದ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಕಂದಾಯ ಇಲಾಖೆಯ ಅಜಟ್ ಧಕಡ್, ಧರ್ಮೇಂದ್ರ ಮೆಹ್ರಾ ಹಾಗೂ ದಯಾರಾಮ್ ಅರ್ಮಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಈಗಾಗಲೇ ಲಾಕ್‍ಡೌನ್‍ನಿಂದ ಮದ್ಯ ಸಿಗದೆ ಎಣ್ಣೆ ಪ್ರಿಯರು ಬೇಸತ್ತು ಹೋಗಿದ್ದಾರೆ. ಈ ನಡುವೆ ಅಧಿಕಾರಿಗಳು ಮದ್ಯದ ಬಾಟಲಿಗಳನ್ನು ಹಿಡಿದು ಪೋಸ್ ನೀಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಎಲ್ಲೆಡೆ ಫೋಟೋಗಳು ವೈರಲ್ ಆಗುತ್ತಿದ್ದಂತೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಇದರಿಂದ ಎಚ್ಚೆತ್ತ ಮಧ್ಯಪ್ರದೇಶ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಮೂವರೂ ಅಧಿಕಾರಿಗಳನ್ನು ಅಮಾನತು ಮಾಡಿದೆ.

Leave a Reply

Your email address will not be published.

Back to top button