ರಾಯ್‍ಪುರ್: ಛತ್ತೀಸ್‍ಗಢದ (Chhattisgarh) ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಟೇಕಲ್ಯಾಣ ಪೊಲೀಸ್ (Police) ಠಾಣಾ ವ್ಯಾಪ್ತಿಯ ದಬ್ಬಕುನ್ನ ಗ್ರಾಮದ ಬಳಿಯ ಅರಣ್ಯದಲ್ಲಿ ಭದ್ರತಾ ಪಡೆಗಳು ಸಂಜೆ 5:30ರ ಸುಮಾರಿಗೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಮೂವರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ. ಅವರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ 1 ಲಕ್ಷ ಜನರಿಂದ ಭಗವದ್ಗೀತೆ ಶ್ಲೋಕ ಪಠಣ
Advertisement
Advertisement
ಎನ್‍ಕೌಂಟರ್ ನಡೆದ ಸ್ಥಳದಿಂದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ. ಹತ್ತಿರದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ದಟ್ಟ ಅರಣ್ಯ ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಅರಣ್ಯದಲ್ಲಿ ಇನ್ನೂ ಮಾವೋವಾದಿಗಳು ಅಡಗಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಕಾರ್ಯಾಚರಣೆ ನಡೆಯುತ್ತಿರುವ ಸ್ಥಳದಲ್ಲಿರುವ ಸಿಬ್ಬಂದಿಯೊಂದಿಗೆ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀರಂಗಪಟ್ಟಣದ ಕಾವೇರಿ ತೀರದಲ್ಲಿ ಅದ್ಧೂರಿ ಹನುಮ ಸಂಕೀರ್ತನಾ ಯಾತ್ರೆ