ಭುವನೇಶ್ವರ: ಭದ್ರತಾ ಪಡೆಗಳು ಎನ್‍ಕೌಂಟರ್ (Encounter) ನಡೆದಿ ಓರ್ವ ಕಮಾಂಡೋ ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಿದ ಘಟನೆ ಒಡಿಶಾದ (Odisha) ಕಲಹಂಡಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
Advertisement
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಕ್ಸಲ್ ನಿಗ್ರಹದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಅಮಿತಾಭ್ ಠಾಕೂರ್, ಮಾವೋವಾದಿಗಳ (Maoists) ಬಗ್ಗೆ ಮಾಹಿತಿ ಸಂಗ್ರಹಿಸುವಾಗ ಕಂಧಮಾಲ್ ಜಿಲ್ಲೆಯ ಗಡಿಯಲ್ಲಿ ಅಡಗಿರುವ ಮಾಹಿತಿ ಸಿಕ್ಕಿತ್ತು. ತಕ್ಷಣ ಭದ್ರತಾ ಪಡೆಯನ್ನು ಕಾರ್ಯಾಚರಣೆಗೆ ಇಳಿಸಲಾಯಿತು. ಎರಡು ಕಡೆಗಳಿಂದ ಗುಂಡಿನ ದಾಳಿ ನಡೆದಿದ್ದು ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆ ವೇಳೆ ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ಒಬ್ಬರ ಕಾಲಿಗೆ ಗುಂಡು ತಗುಲಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಐವರು ಮಾವೋವಾದಿಗಳು ಶರಣು – 30 ದಶಕಗಳ ಬಳಿಕ ನಕ್ಸಲ್ ಮುಕ್ತಗೊಂಡ ಕೌಲೇಶ್ವರಿ ವಲಯ
Advertisement
Advertisement
ಎನ್‍ಕೌಂಟರ್ ನಡೆದ ಸ್ಥಳದಲ್ಲಿ ಎಕೆ-47 ರೈಫಲ್‍ನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ನಕ್ಸಲರು ಅಡಗಿರುವ ಶಂಕೆ ಇದ್ದು ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿವೆ. ಹಲವು ದಿನಗಳಿಂದ ನಕ್ಸಲರ ಚಲನವಲನಗಳನ್ನು ಗುಪ್ತಚರ ಇಲಾಖೆ ಗಮನಿಸಿದ್ದು, ಮಾಹಿತಿ ಕಲೆಹಾಕಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಏ. 26 ರಂದು ಛತ್ತೀಸ್‍ಗಢದಲ್ಲಿ (Chhattisgarh) ನಡೆದ ನಕ್ಸಲ್ ದಾಳಿಯಲ್ಲಿ 10 ಜಿಲ್ಲಾ ರಿಸರ್ವ್ ಗಾರ್ಡ್ (DRG) ಸಿಬ್ಬಂದಿ ಮತ್ತು ಒಬ್ಬ ಚಾಲಕ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ದೇಶದಾದ್ಯಂತ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದೆ. ಇದನ್ನೂ ಓದಿ: ಇಬ್ಬರ ತಲೆಗೆ ಒಟ್ಟು 11 ಲಕ್ಷ ಘೋಷಣೆಯಾಗಿದ್ದ ನಕ್ಸಲರ ಎನ್‍ಕೌಂಟರ್