ರಾಯ್‍ಪುರ್: ಛತ್ತೀಸ್‍ಗಢದ (Chhattisgarh) ಕಂಕೇರ್‌ನಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು (Maoists) ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊಯಲಿಬೆಡ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ರಾ-ಹುರ್ತರೈ ಗ್ರಾಮಗಳ ನಡುವಿನ ಬೆಟ್ಟದ ಮೇಲೆ ಮಾವೋವಾದಿಗಳು ಹಾಗೂ ಭದ್ರತಾ ಸಿಬ್ಬಂದಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಎರಡೂ ಕಡೆಗಳಿಂದಲೂ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಮೂವರು ನಕ್ಸಲರು ಭದ್ರತಾ ಸಿಬ್ಬಂದಿ ಗುಂಡಿಗೆ ಬಲಿಯಾಗಿದ್ದಾರೆ. ಗುಂಡಿನ ದಾಳಿ ಬಳಿಕ ಉಳಿದ ಕೆಲವು ಮಾವೋವಾದಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
Advertisement
Advertisement
ಎನ್‍ಕೌಂಟರ್ ನಡೆದ ಸ್ಥಳದಲ್ಲಿ ಬಂದೂಕುಗಳು ಹಾಗೂ ನಕ್ಸಲರ ಕೆಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹತ್ಯೆಯಾದ ಮಾವೋವಾದಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಬೊಮ್ರಾ-ಹುರ್ತರೈ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಬಗ್ಗೆ ಮಾಹಿತಿ ತಿಳಿದ ಬಳಿಕ ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಜಂಟಿ ತಂಡವನ್ನು ಶನಿವಾರ ರಾತ್ರಿ ಪ್ರದೇಶಕ್ಕೆ ಕಳಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.