IPL ಉದ್ಘಾಟನಾ ಸಮಾರಂಭದಲ್ಲಿ ಸೊಂಟ ಬಳುಕಿಸಲಿದ್ದಾರೆ ರಶ್ಮಿಕಾ ಮಂದಣ್ಣ, ಮಿಲ್ಕಿ ಬ್ಯೂಟಿ ತಮನ್ನಾ

Public TV
2 Min Read
Rashmika Mandanna

ಮುಂಬೈ: ಮಾ.31 ರಿಂದ ಪ್ರತಿಷ್ಠಿತ 16ನೇ ಐಪಿಎಲ್ (IPL 2023) ಆವೃತ್ತಿ ಆರಂಭಗೊಳ್ಳುತ್ತಿದೆ. ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ನಟಿಯರು ಸೊಂಟ ಬಳುಕಿಸಲಿದ್ದು, ಅಭಿಮಾನಿಗಳನ್ನ ರಂಜಿಸಲಿದ್ದಾರೆ.

ಗುಜರಾತ್ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಸಂಜೆ 7.30ಕ್ಕೆ ಮೊದಲ ಪಂದ್ಯ ಆರಂಭವಾಗಲಿದೆ. ಇದಕ್ಕೂ ಮುನ್ನ ಸಂಜೆ 6 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಖ್ಯಾತ ನಟಿಯರಾದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸೊಂಟ ಬಳುಕಿಸಲಿದ್ದಾರೆ. ಇದನ್ನೂ ಓದಿ: ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ಮಾ.31 ರಿಂದ IPL ಧಮಾಕ – ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

kiara advani 3

ಇತ್ತೀಚೆಗೆ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಬಾಲಿವುಡ್ ತಾರೆಯರಾದ ಕಿಯಾರಾ ಅಡ್ವಾಣಿ ಹಾಗೂ ಕೃತಿ ಸನೋನ್ ಭರ್ಜರಿ ಡಾನ್ಸ್ ಮಾಡಿ ಗಮನ ಸೆಳೆದಿದ್ದರು. ಇದೀಗ 16ನೇ ಐಪಿಎಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ತಮನ್ನಾ ಹಾಗೂ ರಶ್ಮಿಕಾ ಭರ್ಜರಿ ನೃತ್ಯ ಪ್ರದರ್ಶನ ನೀಡಲಿದ್ದಾರೆ. ಇದರೊಂದಿಗೆ ಸ್ಟಾರ್ ಸಿಂಗರ್ ಅರ್ಜಿತ್ ಸಿಂಗ್ ಸಹ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ನಂತರ ಪಂದ್ಯ ಆರಂಭವಾಗಲಿದೆ ಎಂದು ಐಪಿಎಲ್ ಸಮಿತಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: IPL-2023 – ಗಾಯದಿಂದಾಗಿ ಪಂದ್ಯಗಳಿಂದ ಹೊರಗುಳಿಯಲಿರುವ ಐದು ಆಟಗಾರರು

ಮಾರ್ಚ್‌ 31 ರಿಂದ ಮೇ 21ರ ವರೆಗೆ ಲೀಗ್‌ ಹಂತದಲ್ಲಿ 18 ಡಬಲ್ ಹೆಡರ್ ಸೇರಿ ಒಟ್ಟು 70 ಲೀಗ್‌ ಪಂದ್ಯಗಳು ನಡೆಯಲಿವೆ. ಕೊನೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ನಾಲ್ಕು ತಂಡಗಳು ಪ್ಲೇ ಆಫ್‌ ಪ್ರವೇಶಿಸಲಿವೆ. ಮೇ 23-26ರ ವರೆಗೆ ಪ್ಲೇ-ಆಫ್‌ ಪಂದ್ಯಗಳು ನಡೆಯಲಿದ್ದು, ಮೇ 28ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ.

Share This Article