ಕೋಲಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಮಗುವೊಂದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಸೋಮಯಾಜಲಹಳ್ಳಿ ಗ್ರಾಮದ ಸುಬ್ರಮಣಿ ಹಾಗೂ ಗಂಗರತ್ನ ದಂಪತಿಯ ಗಂಡು ಮಗು. ನಿನ್ನೆ ಆಸ್ಪತ್ರೆಯಲ್ಲಿ ಮಗು 3 ತಿಂಗಳ ಲಸಿಕೆ ಪಡೆದಿತ್ತು. ವ್ಯಾಕ್ಸಿನ್ ಪಡೆದ ಮಗು ನಿನ್ನೆಯಿಂದ ರಾತ್ರಿ ಮನೆಯಲ್ಲಿ ನಿದ್ದೆ ಮಾಡದೆ ಅಳುತಿತ್ತು. ಹೀಗಾಗಿ ಪೋಷಕರು ಪುನಃ ಮಗುವನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಈ ವೇಳೆ ಡಾಕ್ಟರ್ ಸೌಮ್ಯ ಮಗುಗೆ ಏನೂ ಆಗಿಲ್ಲವೆಂದು ಸಮಜಾಯಿಸಿ ಕಳುಹಿಸಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಥಿಯೇಟರ್ ಹೌಸ್ ಫುಲ್- ಸರ್ಕಾರದಿಂದ ಅನುಮತಿ
Advertisement
Advertisement
ವೈದ್ಯೆಯು ಒಂದೇ ಸಮನೆ ಅಳುತ್ತಿದ್ದ ಮಗುವಿಗೆ ಚಿಕಿತ್ಸೆ ನೀಡದೆ ಖಾಸಗಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಗು ಸಾವನ್ನಪ್ಪಿದೆ. ಇದನ್ನೂ ಓದಿ: ನಕ್ಸಲ್ ನಿಗ್ರಹ ದಳ ಸಿಬ್ಬಂದಿಗೆ ವಿಶೇಷ ಆಹಾರ ಭತ್ಯೆ ಹೆಚ್ಚಿಸಿದ ಸರ್ಕಾರ
Advertisement
ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಪೋಷಕರು ಆರೋಪ ವ್ಯಕ್ತಪಡಿಸಿದ್ದು, ಮಗುವಿನ ಪೋಷಕರು ಹಾಗೂ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.
Advertisement
ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಘಟನೆ ನಡೆದಿದೆ.