ಬೆಂಗಳೂರು: ಇನ್ನೂ ಮೂರು ದಿನಗಳ ಕಾಲಾವಕಾಶ ಇದೆ. ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ. ಸ್ಪರ್ಧೆ ಬಗ್ಗೆ ನಾನು ಚಿಂತನೆ ಮಾಡುತ್ತೇನೆ ಎಂದು ಮಾಜಿ ಸಂಸದ ಡಿಕೆ ಸುರೇಶ್ (DK Suresh) ಹೇಳಿದ್ದಾರೆ.
‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಸಿಪಿ ಯೋಗೇಶ್ವರ್ (CP Yogeshwar) ಸ್ಪರ್ಧೆ ಬಗ್ಗೆ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪಕ್ಷದ ನಾಯಕತ್ವ ತೀರ್ಮಾನ ಮಾಡುತ್ತದೆ. ಅದರ ಬಗ್ಗೆ ನಾನು ಏನೂ ಹೇಳಲ್ಲ ಎಂದರು. ಇದನ್ನೂ ಓದಿ: ಮಳೆಯಾರ್ಭಟಕ್ಕೆ ತತ್ತರಿಸಿ ಹೋದ ಟಾಟಾ ನಗರ – 300ಕ್ಕೂ ಹೆಚ್ಚು ಮನೆಗಳು ಜಲಾವೃತ
ನಾನು ಚನ್ನಪಟ್ಟಣಕ್ಕೆ ಹೋಗುತ್ತಿದ್ದೇನೆ. ಯುವಕರ ಸಭೆ ನಡೆಸಿ ಪಕ್ಷ ಸಂಘಟನೆಗೆ ಏನು ಮಾಡಬೇಕೋ ಅದನ್ನು ಮಾಡುತ್ತೇನೆ. ಯಾರು ಅಭ್ಯರ್ಥಿ ಅನ್ನೋದು ಪಕ್ಷ ಘೋಷಣೆ ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ – ಸಿಪಿವೈ ಪಕ್ಷ ಸೇರುವ ಮುನ್ಸೂಚನೆ ಕೊಟ್ಟ ಸಿಎಂ
ಚನ್ನಪಟ್ಟಣ ಉಪಚುನಾವಣೆಗೆ (Channapatna By Election) ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಯುತ್ತಿದೆ. ಈ ಹಿನ್ನೆಲೆ ಸದಾಶಿವನಗರದ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ ಡಿಕೆ ಸುರೇಶ್ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹಾಸನ| ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ