ಮುಂಬೈ: ಮಹಾರಾಷ್ಟ್ರದ (Maharashtra) ಅಮರಾವತಿಯ (Amravati) ಸರ್ಕಾರಿ ಆಸ್ಪತ್ರೆಯಲ್ಲಿ ಇಂದು (ಆ.24) ಮುಂಜಾನೆ ವೆಂಟಿಲೇಟರ್ ಸ್ಫೋಟಗೊಂಡು (Ventilator Blast) ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಮೂರು ನವಜಾತ ಶಿಶುಗಳು ಸಾವನ್ನಪ್ಪಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ಶಿಶುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ಬೆಳಗಿನ ಜಾವ 3:30ರ ಸುಮಾರಿಗೆ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಸಮಯದಲ್ಲಿ 39 ನವಜಾತ ಶಿಶುಗಳು ಆಸ್ಪತ್ರೆಯ ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿ ಇದ್ದವು. ತೀವ್ರ ಸುಟ್ಟಗಾಯಗಳು ಮತ್ತು ಹೊಗೆಯಿಂದ ಉಸಿರುಗಟ್ಟಿ ಮೂರು ಶಿಶುಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಿದ್ಯುತ್ ಕಂಬಕ್ಕೆ ಪಿಕಪ್ ಡಿಕ್ಕಿ – ಮೂವರು ಕಾರ್ಮಿಕರ ದುರ್ಮರಣ, 15 ಮಂದಿಗೆ ಗಾಯ
ಬೆಂಕಿ ಹೊತ್ತಿಕೊಂಡ ನಂತರ ವೈದ್ಯರು, ನರ್ಸ್‌ಗಳು ಮತ್ತು ಇತರ ಆಸ್ಪತ್ರೆ ಸಿಬ್ಬಂದಿ ವಾರ್ಡ್‌ಗೆ ಧಾವಿಸಿ ಶಿಶುಗಳನ್ನು ಸ್ಥಳಾಂತರಿಸಿದರು. ಅವಘಡದಿಂದ ಸಮಸ್ಯೆಗೊಳಗಾದ ಆರು ನವಜಾತ ಶಿಶುಗಳನ್ನು ಹತ್ತಿರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಇದನ್ನೂ ಓದಿ: ನಕಲಿ ಮೆಡಿಸಿನ್ ಮಾಫಿಯಾ – ಆರೋಪಿಯಿಂದ ಔಷಧಿ ಖರೀದಿಸಿದ್ದ ಮೆಡಿಕಲ್ ಶಾಪ್ ಮಾಲೀಕರಿಗೆ SIT ನೋಟಿಸ್

