ಶ್ರೀನಗರ: ಕಾಶ್ಮೀರದ ಬರಾಮುಲ್ಲಾದಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಘಟನೆ ಜೈಶ್-ಎ-ಮೊಹಮ್ಮದ್(ಜೆಇಎಂ)ನ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಸಂಘರ್ಷದಲ್ಲಿ ಜಮ್ಮು ಹಾಗೂ ಕಾಶ್ಮೀರದ ಒಬ್ಬ ಪೊಲೀಸ್ ಸಿಬ್ಬಂದಿಯೂ ಪ್ರಾಣ ಕಳೆದುಕೊಂಡಿದ್ದಾರೆ.
ಬರಾಮುಲ್ಲಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಕೊಲ್ಲಾಗಿದ್ದು, ಒಬ್ಬ ಪೊಲೀಸ್ ಸಿಬ್ಬಂದಿಯೂ ಸಾವನ್ನಪ್ಪಿದ್ದಾರೆ. ಹತರಾದ ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸ್ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ಮಗುವನ್ನು ಕೊಲೆಗೈದು ತಾಯಿ ಆತ್ಮಹತ್ಯೆ
Advertisement
Advertisement
ಈ ವರ್ಷ ಇಲ್ಲಿಯವರೆಗೆ 22 ಪಾಕಿಸ್ತಾನಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದೇವೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ(ಐಜಿಪಿ) ವಿಜಯ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಉದ್ಯಮಿ ಆದಿಕೇಶವಲು ಮಗ ಶ್ರೀನಿವಾಸ್‍ಗೆ ನ್ಯಾಯಾಂಗ ಬಂಧನ
Advertisement
ಕಳೆದ 3-4 ತಿಂಗಳುಗಳಿಂದ ಬರಾಮುಲ್ಲಾ ಪ್ರದೇಶದಲ್ಲಿ ಸಕ್ರಿಯರಾಗಿದ್ದ ಮೂವರು ಜೆಇಎಂನ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.