ಭುವನೇಶ್ವರ್: ಒಡಿಶಾದ ನುವಾಪಾದ ಜಿಲ್ಲೆಯ ಭದ್ರತಾ ಪೋಸ್ಟ್‌ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚು ದಾಳಿಗೆ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸಿಬ್ಬಂದಿಗಳಲ್ಲಿ ಒಬ್ಬರು ಯೋಧ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಶ್ರೇಣಿಯ ಇಬ್ಬರು ಅಧಿಕಾರಿಗಳು ಸೇರಿದ್ದಾರೆ. ಇದನ್ನೂ ಓದಿ: ಮಹಿಳಾ ಪೊಲೀಸರಿಗೆ ಕ್ಯಾಕರಿಸಿ ಉಗಿದು ಕೈ ನಾಯಕಿ ನೆಟ್ಟಾ ಡಿಸೋಜಾ ಆಕ್ರೋಶ
Advertisement
Advertisement
ಎಎಸ್‌ಐ ಶಿಶುಪಾಲ್ ಸಿಂಗ್, ಎಎಸ್‌ಐ ಶಿವ ಲಾಲ್ ಮತ್ತು ಕಾನ್‌ಸ್ಟೇಬಲ್ ಧರ್ಮೇಂದ್ರ ಕುಮಾರ್ ಸಿಂಗ್ ಹುತಾತ್ಮರು ಎಂದು ಗುರುತಿಸಲಾಗಿದೆ.
Advertisement
ಪಡೆಗಳ ಮೇಲೆ ಮಾವೋವಾದಿಗಳು ಸುಧಾರಿತ ಮತ್ತು ಕಚ್ಚಾ ಬ್ಯಾರೆಲ್ ಗ್ರೆನೇಡ್ ಲಾಂಚರ್‌ಗಳನ್ನು ಬಳಸಿ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳನ್ನು ಉಲ್ಲೇಖಿಸಿ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಸೇನಾ ವ್ಯವಹಾರಗಳ ಇಲಾಖೆ
Advertisement
ನಕ್ಸಲರು ಹುತಾತ್ಮ ಸಿಆರ್‌ಪಿಎಫ್ ಸಿಬ್ಬಂದಿ ಬಳಿಯಿದ್ದ ಮೂರು ಎಕೆ-47 ರೈಫಲ್‌ಗಳನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಐಜಿ ಪೊಲೀಸ್ (ಕಾರ್ಯಾಚರಣೆ) ಅಮಿತಾಭ್ ಠಾಕೂರ್ ಹೇಳಿದ್ದಾರೆ.