ಬಳ್ಳಾರಿ: ವಿಮ್ಸ್ ಆಸ್ಪತ್ರೆಯ(Hospital) ಐಸಿಯುನಲ್ಲಿ(ICU) 3 ರೋಗಿಗಳು ಒಂದೇ ಸಮಯದಲ್ಲಿ ಮೃತಪಟ್ಟ ಘಟನೆ ಬಳ್ಳಾರಿ(Bellary) ಜಿಲ್ಲೆಯಲ್ಲಿ ನಡೆದಿದೆ.
ಐಸಿಯುನಲ್ಲಿ ಮೂರು ರೋಗಿಗಳು ಮೃತಪಟ್ಟ ಬಳಿಕ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸದ್ಯಕ್ಕೆ ಈ ವೀಡಿಯೋ ವೈರಲ್ ಆಗುತ್ತಿದ್ದು, ಮೂವರ ಸಾವಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆ ವೆಂಟಿಲೇಟರ್ ಕಾರ್ಯ ಸ್ಥಗಿತವಾಗಿರುವುದೇ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ.
Advertisement
Advertisement
ಮೂವರ ಮೃತಪಟ್ಟ ಬಳಿಕ ಘಟನೆಗೆ ಸಂಬಂಧಿಸಿ ವಿಮ್ಸ್(Vims) ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದೆ. ಐಸಿಯುದಲ್ಲಿದ್ದ ಉಳಿದ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಿದೆ. ಈ ಐಸಿಯುನಲ್ಲಿ ವಿವಿಧ ಖಾಯಿಲೆಯಿಂದ ಬಳಲುತಿದ್ದ ರೋಗಿಗಳಿದ್ದರು. ಇದನ್ನೂ ಓದಿ: ದಯವಿಟ್ಟು ನನ್ನನ್ನು ಬದುಕಲು ಬಿಡಿ: ವಿಚಾರಣೆ ವೇಳೆ ಕಣ್ಣೀರು ಹಾಕಿದ ಪಾರ್ಥ ಚಟರ್ಜಿ
Advertisement
Advertisement
ವಿಮ್ಸ್ ಆಸ್ಪತ್ರೆಯಲ್ಲಿ ರಾತ್ರಿಯಿಂದ ಬೆಳ್ಳಿಗ್ಗೆವರೆಗೂ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಸಾವನ್ನಪ್ಪಿದ್ದ ಮೂವರ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಸಾವಿಗೀಡಾಗಿದ್ದಾರೆ ಎನ್ನಲಾಗುತ್ತಿದೆ. ಮೃತಪಟ್ಟ ವ್ಯಕ್ತಿಗಳಲ್ಲಿ ಇಬ್ಬರು ಬಳ್ಳಾರಿ ಮೂಲದವರಾಗಿದ್ದು, ಓರ್ವ ಕೊಪ್ಪಳದ ನಿವಾಸಿಯಾಗಿದ್ದರು. ಇದನ್ನೂ ಓದಿ: ಬೆಟ್ಟ ಕುರುಬ ಸೇರಿದಂತೆ ಒಟ್ಟು 12 ಜಾತಿಗಳು ಎಸ್‌ಟಿ ವರ್ಗಕ್ಕೆ ಸೇರ್ಪಡೆ: ಮೋದಿಗೆ ಬಿಎಸ್‌ವೈ ಅಭಿನಂದನೆ