ಚಿಕ್ಕೋಡಿ: ಕಳ್ಳರೆಂದು ಭಾವಿಸಿ ಮೂವರು ಯುವಕರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಸಾರ್ವಜನಿಕರು ಥಳಿಸಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ಬೆಳಗಿನ ಜಾವ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳ್ಳಂಬೆಳಗ್ಗೆ ಜೋಡಕುರಳಿ ಗ್ರಾಮಕ್ಕೆ ಬಂದಿದ್ದ ನಾಲ್ವರು ಯುವಕರನ್ನು ಗ್ರಾಮಸ್ಥರು ತಡೆದು ತಾವು ಯಾರೆಂದು ವಿಚಾರಿಸಿದ್ದಾರೆ. ಈ ವೇಳೆ ಒಬ್ಬ ಯುವಕ ಅಲ್ಲಿಂದ ಪರಾರಿಯಾಗಿದ್ದಾನೆ.
ಆಗ ಇವರು ಕಳ್ಳರಿರಬೇಕೆಂದು ಭಾವಿಸಿದ ಗ್ರಾಮಸ್ಥರು ಮೂವರನ್ನು ಹಿಡಿದು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ಕಟ್ಟಿಗೆಯಿಂದ ಹೊಡೆದು, ಮುಖಕ್ಕೆ ಒದ್ದು ಮನಬಂದಂತೆ ಥಳಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ದುರ್ಮರಣ
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರು ಯುವಕರ ರಕ್ಷಣೆ ಮಾಡಿದ್ದಾರೆ. ಸದ್ಯ ಮೂವರು ಯುವಕರನ್ನು ಥಳಿಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಹಲ್ಲೆಗೊಳಗಾದ ಮೂವರು ಯುವಕರು ರಾಯಬಾಗ ತಾಲೂಕಿನ ಕೆಂಪಟ್ಟಿ ಗ್ರಾಮದವರು ಎಂಬುದು ತಿಳಿದು ಬಂದಿದೆ. ಯುವಕರ ಮೇಲೆ ಹಲ್ಲೆ ಮಾಡಿದ 10ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಂಬುಲೆನ್ಸ್‌ನಲ್ಲಿಯೇ ಡ್ರೈವರ್, ಸಿಬ್ಬಂದಿಯಿಂದ ಮಹಿಳೆಗೆ ಹೆರಿಗೆ
Web Stories