ಉಡುಪಿ: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಮೊವಾಡಿ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ.
ಶ್ರೀಕಾಂತ್, ಹರೀಶ್, ಮಹೇಶ್ ಬಂಧಿತರು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement
ಮೊವಾಡಿ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿರುವ ಬಗ್ಗೆ ಪೊಲೀಸರಿಗೆ ಸೋಮವಾರ ರಾತ್ರಿ ಮಾಹಿತಿ ರವಾನೆಯಾಗಿತ್ತು. ಮಾಹಿತಿ ಪಡೆದ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಹಸುವನ್ನು ಕೊಂದು ಮಾಂಸ ಮಾಡಿ, ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ ಹಸುವಿನ ಮೃತದೇಹದ ಜೊತೆ ಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Advertisement
Advertisement
ಸಮಾರಂಭಕ್ಕೋ? ವ್ಯಾಪಾರಕ್ಕೋ?: ಮೊವಾಡಿ ವಸಮೀಪದ ಮನೆಯ ಕಾರ್ಯಕ್ರಮವೊಂದಕ್ಕೆ ಹಸುವನ್ನು ಕದ್ದು ತಂದು ಮಾಂಸ ಮಾಡುತ್ತಿದ್ದರು ಎಂಬ ಮಾಹಿತಿಯಿದೆ. ಅಲ್ಲದೇ ಹಸುವಿನ ಮಾಂಸವನ್ನು ಮಾರಾಟ ಮಾಡಲು ತರಲಾಗಿತ್ತು ಅಂತ ಕೂಡ ಸ್ಥಳೀಯರು ಆರೋಪಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು ಇನ್ನಷ್ಟೇ ನಿಜಾಂಶ ಹೊರಬರಲಿದೆ.