ಚಿತ್ರದುರ್ಗ: ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾಯಿ, ಮಗ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಹೊರವಲಯದ ಸಮೀಪ ಕ್ಯಾದಿಗೆರೆ ಬಳಿ ನಡೆದಿದೆ.
ರಫೀಕ್ (26), ರಜೀಯಾ (50) ಮೃತ ದುರ್ದೈವಿಗಳಾಗಿದ್ದು, ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಮೃತರನ್ನು ನಗರದ ಕಾಮನಬಾವಿ ಬಡಾವಣೆಯ ನಿವಾಸಿಗಳೆಂದು ಗುರುತಿಸಲಾಗಿದೆ.
Advertisement
ಮೃತ ರಫೀಕ್ ಹಾಗೂ ರಜೀಯಾ ಸಂಬಂಧಿಕರ ವಿವಾಹ ಸಮಾರಂಭಕ್ಕೆ ಬೈಕಿನಲ್ಲಿ ತೆರಳಿದ್ದರು. ಮದುವೆ ಕಾರ್ಯಕ್ರಮ ಮುಗಿದ ಬಳಿಕ ಮರಡಿಹಳ್ಳಿಗೆ ವಾಪಾಸ್ಸಾಗುತ್ತಿದ್ದರು. ಈ ವೇಳೆ ಕ್ಯಾದಿಗೆರೆ ಸಮೀಪ ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
Advertisement
ಡಿಕ್ಕಿಯ ರಭಸಕ್ಕೆ ಎರಡೂ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv