ಅಮರಾವತಿ: ಮುಂಬೈ (Mumbai) ಮೂಲದ ಮಾಡೆಲ್ ಕಮ್ ನಟಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿ, ಕಿರುಕುಳ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶದ (Andhra Pradesh) ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಡೈರೆಕ್ಟರ್ ಜನರಲ್ ಶ್ರೇಣಿಯ ಒಬ್ಬರು, ಇನ್ಸ್ ಪೆಕ್ಟರ್ ಜನರಲ್ ಮತ್ತು ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪಿಎಸ್ ಆರ್ ಆಂಜನೇಯುಲು (ಡಿಜಿ ಶ್ರೇಣಿ), ಕಂಠಿ ರಾಣಾ ಟಾಟಾ (ಐಜಿ ಶ್ರೇಣಿ) ಮತ್ತು ವಿಶಾಲ್ ಗುನ್ನಿ (ಎಸ್‍ಪಿ ಶ್ರೇಣಿ) ಅಮಾನತುಗೊಂಡ ಮೂವರು ಹಿರಿಯ ಅಧಿಕಾರಿಗಳಾಗಿದ್ದಾರೆ.
Advertisement
ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಸರ್ಕಾರದ ಆಡಳಿತದ ಇರುವಾಗ ನಟಿ ಪೊಲೀಸರಿಂದ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಆರೋಪಿಸಿದ್ದರು. ಮುಂಬೈನ ಕಾರ್ಪೋರೇಷನ್‌ನ ಉನ್ನತ ಕಾರ್ಯನಿರ್ವಾಹಕರ ವಿರುದ್ಧ ತಾನು ಈ ಹಿಂದೆ ದಾಖಲಿಸಿದ ಪ್ರಕರಣವನ್ನು ಹಿಂದೆಗೆದುಕೊಳ್ಳಬೇಕು. ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಬೆದರಿಕೆ ಹಾಕಿದ್ದರು. ಅಲ್ಲದೇ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಿದ್ದರು ಎಂದು ನಟಿ ಆರೋಪಿಸಿದ್ದರು.
Advertisement
ಆಂಧ್ರಪ್ರದೇಶ ಪೊಲೀಸರು ಆರೋಪಗಳ ವಿಚಾರಣೆ ನಡೆಸಿದ್ದು, ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಮತ್ತು ದುರ್ನಡತೆ ಆರೋಪದಡಿ ಅಮಾನತು ಆದೇಶ ಹೊರಡಿಸಲಾಗಿದೆ. ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969 ರ ನಿಯಮ 3 (1) ರ ಅಡಿಯಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಆಗ ರಾಜ್ಯ ಗುಪ್ತಚರ ಮುಖ್ಯಸ್ಥರಾಗಿದ್ದ ಪಿ ಎಸ್ ಆರ್ ಆಂಜನೇಯುಲು ಅವರು ಫೆಬ್ರವರಿ 2 ರಂದು ಎಫ್‍ಐಆರ್ ದಾಖಲಿಸುವ ಮೊದಲೇ ಕಂಠಿ ರಾಣಾ ಟಾಟಾ ಮತ್ತು ವಿಶಾಲ್ ಗುನ್ನಿ ಅವರನ್ನು ಕರೆಸಿ ಜನವರಿ 31 ರಂದು ನಟನ ಬಂಧನಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಅಮಾನತು ಆದೇಶದಲ್ಲಿ ಆಂಜನೇಯುಲು ಅವರು ತಮ್ಮ ಅಧಿಕಾರ ಮತ್ತು ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ಸಮರ್ಪಕ ಪರಿಶೀಲನೆಯಿಲ್ಲದೆ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿದ್ದಾರೆ. ಇದು ಅಧಿಕಾರದ ದುರುಪಯೋಗ ಎಂದು ಆದೇಶದಲ್ಲಿ ಹೇಳಲಾಗಿದೆ.
ವಿಜಯವಾಡದ ಮಾಜಿ ಕಮಿಷನರ್ ಆಗಿದ್ದ ಕಂಠಿ ರಾಣಾ ಟಾಟಾ ಅವರು ತನಿಖೆಯನ್ನು ಸರಿಯಾಗಿ ಮೇಲ್ವಿಚಾರಣೆ ಮಾಡಲು ವಿಫಲರಾಗಿದ್ದಾರೆ ಮತ್ತು ಎರಡು ದಿನಗಳ ನಂತರ ಎಫ್‍ಐಆರ್ ದಾಖಲಿಸುವ ಮೊದಲು ಜನವರಿ 31 ರಂದು ತಮ್ಮ ಮೇಲಧಿಕಾರಿಗಳ ಮೌಖಿಕ ಸೂಚನೆಯ ಮೇರೆಗೆ ನಟಿಯನ್ನು ಬಂಧಿಸಲು ಆದೇಶ ಹೊರಡಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣ ದಾಖಲಾದ 1 ಗಂಟೆ ಬಳಿಕ, ಸರಿಯಾದ ಲಿಖಿತ ಆದೇಶ ಇಲ್ಲದೇ ನಟಿಯ ಬಂಧನಕ್ಕಾಗಿ ಮುಂಬೈಗೆ ತೆರಳಲು ಪೊಲೀಸ್ ಅಧಿಕಾರಿಗಳಿಗೆ ಟಿಕೆಟ್‍ಗಳನ್ನು ಕಾಯ್ದಿರಿಸುವಂತೆ ಅವರು ಆದೇಶಿಸಿದ್ದರು ಎಂದು ವರದಿಯಾಗಿದೆ.
ನಟನನ್ನು ಬಂಧಿಸುವ ಮುನ್ನ ದೂರನ್ನು ಕೂಲಂಕಷವಾಗಿ ಪರಿಶೀಲಿಸಲು ವಿಫಲವಾದ ಆರೋಪವನ್ನು ವಿಶಾಲ್ ಗುನ್ನಿ ಮೇಲೆ ಹೊರಿಸಲಾಗಿದೆ. ಸರಿಯಾದ ಲಿಖಿತ ಆದೇಶವಿಲ್ಲದೆ ಬಂಧನಕ್ಕಾಗಿ ಫೆಬ್ರವರಿ 2 ರಂದು ಮುಂಬೈಗೆ ಪ್ರಯಾಣಿಸಿದ್ದರು ಮತ್ತು ಮೇಲಧಿಕಾರಿಗಳ ಮೌಖಿಕ ಸೂಚನೆಯಂತೆ ಕಾರ್ಯನಿರ್ವಹಿಸಿದ್ದರು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಟಿ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಇಬ್ರಾಹಿಂಪಟ್ಟಣಂ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ದೂರು ದಾಖಲಿಸಿದ್ದರು.