LatestMain PostNational

ಸೇನಾ ಶಿಬಿರದೊಳಗೆ ನುಗ್ಗಲು ಯತ್ನಿಸಿದ್ದ ಇಬ್ಬರು ಉಗ್ರರ ಹತ್ಯೆ- ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್‍ನಲ್ಲಿ ಸೇನಾ ಶಿಬಿರಕ್ಕೆ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಈ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಇಂದು ಮುಂಜಾನೆ ರಾಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್‍ನಲ್ಲಿರುವ ಸೇನಾ ಶಿಬಿರಕ್ಕೆ ನುಸುಳಲು ಯತ್ನಿಸಿದ್ದ ಇಬ್ಬರು ಉಗ್ರರು ದಾಳಿ ನಡೆಸಿದ್ದಾರೆ. ಘಟನೆ ಸಂಬಂಧಿಸಿ ಭದ್ರತಾ ಅಧಿಕಾರಿಗಳು ಪ್ರದೇಶಕ್ಕೆ ಹೆಚ್ಚಿನ ರಕ್ಷಣೆಯನ್ನು ನೀಡಿದ್ದಾರೆ.

ಘಟನೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಹಾಗೂ ಐವರು ಯೋಧರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್‍ನಲ್ಲಿರುವ ಸೇನಾ ಶಿಬಿರದ ಬೇಲಿಯನ್ನು ಅಕ್ರಮವವಾಗಿ ದಾಟಲು ಪ್ರಯತ್ನಿಸುತ್ತಿರುವಾಗ ಸೈನಿಕರು ತಡೆದಿದ್ದಾರೆ. ಈ ವೇಳೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಉಗ್ರರ ಹತ್ಯೆಯಾಗಿದ್ದು, ಮೂವರು ಸೇನಾ ಸಿಬ್ಬಂದಿಗಳು ಮಡಿದಿದ್ದಾರೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆಯರಿಗೆ ಅಗ್ನಿವೀರ್‌ ನೇಮಕಾತಿ ಪ್ರಕ್ರಿಯೆ – ಅರ್ಹತೆ ಏನು? ಪರೀಕ್ಷೆ ಹೇಗಿರುತ್ತೆ?

75ನೇ ಸ್ವಾತಂತ್ರ್ಯೋತ್ಸವಕ್ಕೆ ಇನ್ನೇನೂ ಕೆಲವು ದಿನಗಳು ಬಾಕಿಯಿದ್ದು ಈ ದಾಳಿ ನಡೆದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಬುದ್ಗಾಮ್‍ನಲ್ಲಿ ಮೂವರು ಲಷ್ಕರ್ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿತ್ತು. ಇದಾದ ನಂತರ ಈ ದಾಳಿ ನಡೆದಿದೆ. ಹತ್ಯೆಯಾದ ಉಗ್ರರಲ್ಲಿ ಒಬ್ಬರು ರಾಹುಲ್ ಭಟ್ ಮತ್ತು ಅಮರೀನ್ ಭಟ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಕಾಶ್ಮೀರಿ ಪಂಡಿತ ರಾಹುಲ್ ಭಟ್‌ನನ್ನು ಕೊಂದಿದ್ದ ಭಯೋತ್ಪಾದಕನ ಎನ್‌ಕೌಂಟರ್

Live Tv

Leave a Reply

Your email address will not be published.

Back to top button