ಹಿಂದೂ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮೂವರಿಗೆ ಚಾಕು ಇರಿತ

Public TV
1 Min Read
Mangaluru Attack

ಮಂಗಳೂರು: ಹಿಂದೂ ಕಾರ್ಯಕರ್ತ (Hindu Activist) ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನ (Mangaluru) ಸುತ್ತಮುತ್ತ ಮೂವರಿಗೆ ಚಾಕು ಇರಿತವಾಗಿದೆ.

ನಗರದ ಹೊರವಲಯದ ಕಣ್ಣೂರಿನಲ್ಲಿ ಮುಂಜಾನೆ 3 ಗಂಟೆಗೆ ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ. ಐವರು ದುಷ್ಕರ್ಮಿಗಳು, ನಗರದ ಮಾರುಕಟ್ಟೆ ಕೆಲಸಕ್ಕೆ ಹೋಗುತ್ತಿದ್ದ ಇರ್ಶಾದ್ ಎಂಬ ಯುವಕನ ಮೇಲೆ ದಾಳಿ ಮಾಡಿ ಚಾಕು ಇರಿದಿದ್ದಾರೆ. ಈ ವೇಳೆ, ಮನೆಯೊಂದಕ್ಕೆ ಓಡಿ ಹೋಗಿ ಇರ್ಶಾದ್ ಜೀವ ಉಳಿಸಿಕೊಂಡಿದ್ದಾನೆ. ಗಾಯಾಳುವಿಗೆ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಹಿಂದುತ್ವಕ್ಕಾಗಿ ಪ್ರಾಣವನ್ನೇ ಕೊಡ್ತೇನೆ ಅಂತಿದ್ದವನ ಜೀವವನ್ನೇ ತೆಗೆದ್ರು: ಸುಹಾಸ್ ಶೆಟ್ಟಿ ತಾಯಿ ಕಣ್ಣೀರು

ಕೊಂಚಾಡಿ ಹಾಗೂ ಉಳ್ಳಾಲದಲ್ಲಿ ಸಹ ಇಬ್ಬರಿಗೆ ಚಾಕು ಇರಿಯಲಾಗಿದೆ. ತಡರಾತ್ರಿ ಈ ದಾಳಿ ನಡೆದಿದ್ದು, ಮೂವರು ಗಾಯಾಳುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರ ಬಜ್ಪೆಯ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ನಡೆದಿತ್ತು. ಸುರತ್ಕಲ್‍ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ಸುಮಾರು 10 ಮಂದಿ ಸೇರಿ ತಲವಾರಿನಿಂದ ಹತ್ಯೆ ಮಾಡಿದ್ದರು. ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಮಂಗಳೂರಿನಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಗೆ ಪಾಕಿಸ್ತಾನ್ ಜಿಂದಾಬಾದ್ ಕಾರಣ: ಆರ್.ಅಶೋಕ್ ಕಿಡಿ

Share This Article