ಯಾದಗಿರಿ: ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಯಾದಗಿರಿ (Yadgir) ಸುರಪುರ (Surapura)
ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ.
ನಗನೂರು ಗ್ರಾಮದ ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಮೃತ ಬಾಲಕರು ಎಂದು ತಿಳಿದು ಬಂದಿದೆ. ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದ ವೇಳೆ ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ಗ್ರಾಮಸ್ಥರು ಮೃತ ಬಾಲಕರ ಶವ ಹೊರತೆಗೆದಿದ್ದಾರೆ. ಘಟನಾ ಸ್ಥಳದಲ್ಲಿ ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: 6 ವರ್ಷದ ಮಗಳ ಮುಂದೆಯೇ ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ!
ಯಾದಗಿರಿ ಎಸ್ಪಿ ಸಂಗೀತಾ.ಜಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಬಾಲಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಹಾಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂದ ಕೆಂಭಾವಿ ಪೊಲೀಸ್ (Kembhavi Polic) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತರಬೇತಿ ವೇಳೆ ಪರಸ್ಪರ ಡಿಕ್ಕಿ ಹೊಡೆದುಕೊಂಡ ಹೆಲಿಕಾಪ್ಟರ್‌ಗಳು- 10 ಮಂದಿ ದುರ್ಮರಣ