Bengaluru CityKarnatakaLatestLeading NewsMain Post

ಬೆಂಗ್ಳೂರಿನ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವಿದ್ಯಾರ್ಥಿಗಳು – ಮೂವರು ವಶಕ್ಕೆ

ಬೆಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ (Collage) ಮೂವರು ವಿದ್ಯಾರ್ಥಿಗಳು (Students) ಪಾಕಿಸ್ತಾನ ಜಿಂದಾಬಾದ್ (Pakistan zindabad) ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ಬಗ್ಗೆ ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯರು ಕಾಲೇಜಿನ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಜೊತೆಗೆ ಅದೇ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳು ಜೈ ಕರ್ನಾಟಕ ಮಾತೆ ಎನ್ನಬೇಕೆಂದು ಪಟ್ಟು ಹಿಡಿದಿದ್ದರು. ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಗೋಲ್ಮಾಲ್ – ಚಿಲುಮೆ ಸಂಸ್ಥೆಯ ನಾಲ್ವರು ಪೊಲೀಸರ ವಶಕ್ಕೆ

ಈ ಘಟನೆಯಿಂದ ಪರಿಸ್ಥಿತಿ ಹದಗೆಡುತ್ತಿದ್ದಂತೆ ಸ್ಥಳಕ್ಕೆ ಮಾರತ್‌ಹಳ್ಳಿ ಪೊಲೀಸರು ಆಗಮಿಸಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ತಮಾಷೆಗಾಗಿ ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದ್ದಾಗಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಮನಿಗಿಂತ ರಾವಣ ಜ್ಞಾನಿ – ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ: ರಾಜನಾಥ್ ಸಿಂಗ್

Live Tv

Leave a Reply

Your email address will not be published. Required fields are marked *

Back to top button