CrimeLatestLeading NewsMain PostNational

ಬಸ್ ಮೇಲೆ ದಾಳಿಗೈದ ಮೂವರು ಉಗ್ರರ ಹತ್ಯೆ

ಶ್ರೀನಗರ: ಪೊಲೀಸ್ ಬಸ್ ಮೇಲೆ ದಾಳಿ ಮಾಡಿದ್ದ ಮೂವರು ಉಗ್ರರನ್ನು ಭದ್ರತಾ ಪಡೆ ಶ್ರೀನಗರದಲ್ಲಿ ಎನ್‍ಕೌಂಟರ್ ಮಾಡಿ ಹತ್ಯೆ ಮಾಡಿದೆ.

ಡಿಸೆಂಬರ್ 13 ರಂದು ಶ್ರೀನಗರದ ಹೊರವಲಯದಲ್ಲಿ ಪೊಲೀಸ್ ಬಸ್ ಮೇಲೆ ದಾಳಿ ಮಾಡಿದ ಉಗ್ರರನ್ನು ಪೊಲೀಸರು ಗುರುವಾರ ರಾತ್ರಿ ಎನ್‍ಕೌಂಟರ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಸಶಸ್ತ್ರ ಪೊಲೀಸ್ ಸಿಬ್ಬಂದಿಯ ಮೇಲೆ ಮಾರಣಾಂತಿಕ ದಾಳಿಯಲ್ಲಿ ಭಾಗಿಯಾಗಿದ್ದ ಎಲ್ಲ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಜೆಇಎಂ ಭಯೋತ್ಪಾದಕ ಸುಹೇಲ್ ಅಹ್ಮದ್ ರಾಥರ್ ಎಂದು ಗುರುತಿಸಲಾಗಿದೆ. ಕಳೆದ 36 ಗಂಟೆಗಳಲ್ಲಿ ಇದು ಮೂರನೇ ಎನ್‍ಕೌಂಟರ್ ಆಗಿದ್ದು, ಹತರಾದ ಉಗ್ರರ ಸಂಖ್ಯೆ 9ಕ್ಕೆ ಏರಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:  ಅನುಮತಿ ಇಲ್ಲದೇ ಯಾರೋ ಮನೆಯೊಳಗೆ ಬಂದರೆಂದು ತಪ್ಪಾಗಿ ಭಾವಿಸಿ ಮಗಳನ್ನೇ ಕೊಂದ ತಂದೆ!

ಇದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಆರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು

Leave a Reply

Your email address will not be published.

Back to top button