ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ (Indian Army) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದ ಉಗ್ರರು ಇತ್ತೀಚೆಗೆ ಕಾಶ್ಮೀರದಲ್ಲಿ ಸೇನೆ ಮತ್ತು ಪೊಲೀಸರ ಮೇಲೆ ನಡೆದ ದಾಳಿಯಲ್ಲಿ ಉಗ್ರರು ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಎನ್‍ಕೌಂಟರ್ (Encounter) ನಡೆದ ಜಾಗದಿಂದ ಅಮೆರಿಕ ನಿರ್ಮಿತ ಎಂ4 ಕಾರ್ಬೈನ್ ಗನ್ ಸೇರಿದಂತೆ ಅಪಾರ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂವರು ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಎಸ್‌ಜಿಯಿಂದ ಆ್ಯಂಟಿ- ಹೈಜಾಕ್ ಅಣುಕು ಪ್ರದರ್ಶನ
ಕಳೆದ ವಾರ ಭಯೋತ್ಪಾದಕರ ಸರಣಿ ದಾಳಿಯ ನಂತರ ದೋಡಾ ಮತ್ತು ರಾಜೌರಿ, ಪೂಂಚ್ ಪ್ರದೇಶಗಳಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಜೂ.11 ರಂದು, ಸೇನಾ ಶಿಬಿರದ ಮೇಲೆ ದಾಳಿ ನಡೆಸಲಾಗಿತ್ತು. ಇದರಲ್ಲಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದರು. ಇನ್ನೊಂದು ಘಟನೆಯಲ್ಲಿ, ಭಯೋತ್ಪಾದಕರು ಪೊಲೀಸ್ ಶಿಬಿರದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.
ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ಒದಗಿಸಿದ ಮೂವರು ಸ್ಥಳೀಯರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್