ಚಿಕ್ಕಮಗಳೂರು: ತರಕಾರಿ ಅಂಗಡಿಯಲ್ಲಿದ್ದ 3,000 ಸಾವಿರ ಮೌಲ್ಯದ 40 ಕೆ.ಜಿ. ಟೊಮೆಟೋ (Tomato) ಇದ್ದ 2 ಟ್ರೇ ಕಳ್ಳತನವಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಜಿಲ್ಲೆಯ ಆಲ್ದೂರಿನಲ್ಲಿ ನಡೆದಿದೆ.
ಆಲ್ದೂರು ಪಟ್ಟಣದ ನದೀಂ ಎಂಬವರ ಅಂಗಡಿಯಲ್ಲಿ 2 ಟ್ರೇ ಟೊಮೆಟೋ ಕಳ್ಳತನವಾಗಿದೆ. ಸೋಮವಾರ ರಾತ್ರಿ ಎಂದಿನಂತೆ ತರಕಾರಿಯನ್ನ ಅಂಗಡಿಯಲ್ಲಿ ಇಟ್ಟು ಟಾರ್ಪಲ್ ಎಳೆದು ಹೋಗಿದ್ದರು. ಆದರೆ ಮಂಗಳವಾರ ಬೆಳಗ್ಗೆ ಅಂಗಡಿಗೆ ಬಂದಾಗ ಟೊಮೆಟೋ ಇರಲಿಲ್ಲ. ಆಗ ಅಂಗಡಿಯ ಟಾರ್ಪಲ್ ಸರಿಸಿರುವುದು ಬೆಳಕಿಗೆ ಬಂದಿದೆ.
ಆಲ್ದೂರು ಠಾಣೆಯ ಕಾಂಪೌಂಡ್‍ಗೆ ಹೊಂದಿಕೊಂಡಂತಿರುವ ತರಕಾರಿ ಅಂಗಡಿಯಲ್ಲಿ ಟೊಮೆಟೋ ಕಳ್ಳತನವಾಗಿದ್ದು, ಸಾಲ ಮಾಡಿ ತರಕಾರಿ ವ್ಯಾಪಾರ ಮಾಡಿಕೊಂಡು ಬದುಕು ದೂಡುತ್ತಿದ್ದ ನದೀಂ ಅವರು ಅತಂತ್ರಕ್ಕೀಡಾಗಿದ್ದಾರೆ. ಇದೀಗ ನದೀಂ ಅವರು ಟೊಮೆಟೋ ಕಳ್ಳತನವಾಗಿರುವ ಬಗ್ಗೆ ಆಲ್ದೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಹಾಸನಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಮೌಲ್ಯದ ಟೊಮೆಟೋ ಕಳ್ಳತನ
Web Stories