ಲಕ್ನೋ: ಪಟಾಕಿ ಕಾರ್ಖಾನೆಯಲ್ಲಿ (Firecracker Factory) ಏಕಾಏಕಿ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ (Uttar Pradesh) ಸಹರಾನ್‌ಪುರದಲ್ಲಿ (Saharanpur) ಶನಿವಾರ ನಡೆದಿದೆ.
ಇಲ್ಲಿನ ನಿಹಾಲ್ ಖೇಡಿ ಗ್ರಾಮದಲ್ಲಿ ಬೆಳಗಿನ ಜಾವ 4:30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ಶಬ್ದ ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಪ್ರತಿಧ್ವನಿಸಿದೆ. ಘಟನೆ ಸಂಭವಿಸಿದ ವೇಳೆ ಕಾರ್ಖಾನೆಯಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಸಹರಾನ್‌ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಕಾರು
ಸ್ಫೋಟದ ಬಗ್ಗೆ ಮಾಹಿತಿ ದೊರೆತ ತಕ್ಷಣ ಪೊಲೀಸ್ ಸಿಬ್ಬಂದಿ, ವಿಧಿವಿಜ್ಞಾನ ತಂಡ ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ಧಾವಿಸಿತು. ಸ್ಫೋಟದ ತೀವ್ರತೆಗೆ ಕಟ್ಟಡ ಕುಸಿದು ಬಿದ್ದಿದೆ. ಘಟನೆ ಸಂಬಂಧ ಕಾರ್ಖಾನೆಯ ಮೂವರು ನಿರ್ವಾಹಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಬನ್ಸಾಲ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಅನೇಕ ಅಕ್ರಮ ಪಟಾಕಿ ಕಾರ್ಖಾನೆಗಳು ನಡೆಯುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ನಮ್ಮ ಧರ್ಮ ಯಾರನ್ನ ಕೊಲ್ಲಲೂ ಅನುಮತಿಸಲ್ಲ – ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮಕ್ಕೆ ಮುಸ್ಲಿಮರ ಒತ್ತಾಯ