ಕೊಚ್ಚಿ: ಮಾತು ಕೇಳಿಲ್ಲ ಎಂಬ ಕಾರಣಕ್ಕೆ ತಾಯಿ ನೀಡಿದ್ದ ಚಿತ್ರಹಿಂಸೆಗೆ ಕೋಮಾ ಸ್ಥಿತಿಗೆ ಹೋಗಿದ್ದ 3 ವರ್ಷದ ಪುಟ್ಟ ಕಂದಮ್ಮ, ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದೆ.
ಮೆದುಳಿಗೆ ಗಂಭೀರವಾಗಿ ಪೆಟ್ಟಾದ ಹಿನ್ನೆಲೆ 3 ವರ್ಷದ ಮಗು ಸಾವನ್ನಪ್ಪಿದೆ. ಜಾರ್ಖಂಡ್ ಮೂಲದ ಈ ಮಗುವಿನ ತಾಯಿ ಮಗ ತನ್ನ ಮಾತು ಕೇಳುತ್ತಿರಲಿಲ್ಲ ಎಂದು ಮನಬಂದಂತೆ ಥಳಿಸಿದ್ದಾಳೆ. ಪರಿಣಾಮ ಗಂಭೀರವಾಗಿ ಪೆಟ್ಟಾಗಿದ್ದ ಮಗುವನ್ನು ತಂದೆ ಬುಧವಾರ ರಾತ್ರಿ ಕೊಚ್ಚಿ ಬಳಿಯ ಅಳುವಾದ ಖಾಸಗಿ ಆಸ್ಪತ್ರೆಗೆ ಸೇರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
Advertisement
Advertisement
ಡೆಸ್ಕ್ ನಿಂದ ಕೆಳಗೆ ಬಿದ್ದು ಮಗು ತಲೆಗೆ ಪೆಟ್ಟು ಮಾಡಿಕೊಂಡಿದೆ ಎಂದು ಹೇಳಿ ತಂದೆ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ತಂದೆ ಮಾತಿನ ಮೇಲೆ ಆಸ್ಪತ್ರೆ ಸಿಬ್ಬಂದಿಗೆ ಅನುಮಾನ ಬಂದ ಕಾರಣ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Advertisement
ಬಾಲಕನಿಗೆ ಮರದ ವಸ್ತುವಿನಿಂದ ಹೊಡೆದಿದ್ದಾರೆ ಹಾಗೂ ದೇಹದ ಮೇಲೆ ಸುಟ್ಟ ಗಾಯಗಳು ಕೂಡ ಕಂಡು ಬಂದಿದೆ. ಬಾಲಕನ ತಲೆಗೆ ಗಂಭೀರವಾಗಿ ಪೆಟ್ಟಾದ ಹಿನ್ನೆಲೆ ಬಲಭಾಗದ ಮೆದುಳು ಸಂಪೂರ್ಣ ನಿಷ್ಕ್ರೀಯಗೊಂಡಿತ್ತು. ಈ ಬಗ್ಗೆ ತಿಳಿದ ತಕ್ಷಣವೇ ಸರ್ಜರಿ ಮಾಡಲಾಗಿತ್ತು. ಬಳಿಕ ಬಾಲಕ ಕೋಮಾ ಸ್ಥಿತಿಯಲ್ಲಿದ್ದನು ಎಂದು ವೈದ್ಯರು ಹೇಳಿದ್ದಾರೆ.
Advertisement
ಬಾಲಕನ ಎಲ್ಲ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಕೇರಳ ಆರೋಗ್ಯ ಸಚಿವೆ ಶೈಲಜಾ ಭರವಸೆ ನೀಡಿದ್ದರು. ಅಲ್ಲದೆ ಕೊಟ್ಟಾಯಂ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯರ ತಂಡವನ್ನು ಸಹ ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆಸುವುದಾಗಿ ತಿಳಿಸಿದ್ದರು. ಆದ್ರೆ ದುರದೃಷ್ಟವಶಾತ್ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ.
ಈ ಸಂಬಂಧ ಮಗುವಿನ ತಾಯಿಯನ್ನು ಬಂಧಿಸಲಾಗಿದ್ದು, ಆಕೆಯ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೋಲೆ ಪ್ರಕರಣ ದಾಖಲಿಸಲಾಗಿದೆ. ಸದ್ಯ ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೊತೆಗೆ ಜಾರ್ಖಂಡ್‍ನಲ್ಲಿರುವ ಆ ಮಗುವಿನ ಕುಟುಂಬದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಹಾಗೂ ಆತನ ತಂದೆ, ತಾಯಿ ನಿಜವಾಗಲೂ ಹೆತ್ತ ತಾಯಿ-ತಂದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.