ಚಿಕ್ಕಬಳ್ಳಾಪುರ: ತೆಂಗಿನ ಮರ (Coconut Tree) ಮುರಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಗೌರಿಬಿದನೂರು (Gaurididanur) ತಾಲೂಕಿನ ಹಾಲಗಾನಹಳ್ಳಿಯಲ್ಲಿ (Halaganahalli) ನಡೆದಿದೆ.
ಪೃಥ್ವಿರಾಜ್(3) ಮೃತ ಮಗು, ಗರ್ಭಿಣಿ ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯಗಳಾಗಿವೆ. ಗರ್ಭಿಣಿ ಮೋನಿಕಾ 15 ದಿನಗಳ ಹಿಂದೆ ಹೆರಿಗೆಗಾಗಿ ತವರು ಮನೆ ಹಾಲಗಾನಹಳ್ಳಿಗೆ ಬಂದಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಪಾಕಿಸ್ತಾನ ಆಲೌಟ್ – ಭಾರತಕ್ಕೆ 242 ರನ್‌ಗಳ ಟಾರ್ಗೆಟ್
ಭಾನುವಾರ (ಫೆ.23) ಮನೆಯ ಮುಂದೆ ಇದ್ದ ತೆಂಗಿನ ಮರ ಮುರಿದು ಬಿದ್ದಿದೆ. ಪರಿಣಾಮ ಮಗು ಸಾವನ್ನಪ್ಪಿದೆ. ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರಿಗೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಅಧಿಕಾರದಲ್ಲಿ ತೃಪ್ತಿ ಅನ್ನೋದು ಇರಲ್ಲ: ಟಿ.ಬಿ ಜಯಚಂದ್ರ
ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.