ಲಕ್ನೋ: ಮೆಟ್ರೋ ನಿಲ್ದಾಣದ (Metro Station) ಕೆಳಗೆ ಪೋಷಕರೊಟ್ಟಿಗೆ ಮಲಗಿದ್ದ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಬುಧವಾರ ತಡರಾತ್ರಿ ದಿನಗೂಲಿ ಕಾರ್ಮಿಕರ (Daily Wage Labourers) ಮಗಳಾದ ಬಾಲಕಿ ಮೆಟ್ರೋ ನಿಲ್ದಾಣದ ಕೆಳಗೆ ಮಲಗಿದ್ದಾಗ ಘಟನೆ ನಡೆದಿದೆ. ಆರೋಪಿಯು ಬಾಲಕಿ ಪೋಷಕರೊಟ್ಟಿಗೆ ಮಲಗಿದ್ದಾಗಲೇ ಹೊತ್ತೊಯ್ದು ಏಕಾಂತ ಸ್ಥಳದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅತ್ಯಂತ ಕರಾಳ ದಿನ, ಡಿಸಿಎಂ ಅಪರಾಧಿ ಅನ್ನೋದು ರಾಜ್ಯಕ್ಕೆ ಗೊತ್ತಿದೆ: ಭಾಸ್ಕರ್ ರಾವ್ ಆಕ್ರೋಶ
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉಪ ಪೊಲೀಸ್ ಆಯುಕ್ತ (ಕೇಂದ್ರ) ಆಶಿಶ್ ಕುಮಾರ್ ಶ್ರೀವಾಸ್ತವ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಬಾಲಕಿಯನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್, ಉಳಿದವರು ಎಸ್ಕೇಪ್
ಬಳಿಕ ಮಾತನಾಡಿರುವ ಡಿಸಿಪಿ, ಅಲಂಬಾಗ್ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಘಟನೆ ಬಳಿಕ ಆರೋಪಿಯನ್ನ ಬಂಧಿಸಲು ಐದು ವಿಶೇಷ ತಂಡಗಳನ್ನ ರಚಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್ಗೆ ಖುಷಿ ಮುಖರ್ಜಿ ಬೋಲ್ಡ್ ಉತ್ತರ