ಬಳ್ಳಾರಿ: ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಬಳ್ಳಾರಿ (Ballary) ಜಿಲ್ಲೆಯ ಹೊಸಪೇಟೆ (Hosapete) ತಾಲೂಕಿನ ತಿಮ್ಮಲಾಪುರ ಟೋಲ್ ಪ್ಲಾಜಾ ಬಳಿ ನಡೆದಿದೆ.
ಅಂದಾಜು 3 ವರ್ಷದ ಗಂಡು ಚಿರತೆ ಸಾವನ್ನಪ್ಪಿದ್ದು, ಸಿಬ್ಬಂದಿ ಗಸ್ತಿಗೆ ತೆರಳಿದ ಸಮಯದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: LPG, CNG ಮಧ್ಯೆ ಹೈವೇಗಳಲ್ಲಿ ಡಿಸೇಲ್ ಕೊರತೆ – ಸರಕು ವಾಹನಗಳ ಬಾಡಿಗೆಯೂ ಏರಿಕೆ!
50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ತಿಮ್ಮಲಾಪುರ ಗ್ರಾಮದ ಬಳಿ ಚಿರತೆಗೆ ವಾಹನ ಡಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಹೊಸಪೇಟೆ ಪ್ರಾದೇಶಿಕ ಅರಣ್ಯ ವಲಯದ ಚಿಲಕನಹಟ್ಟಿ ಶಾಖೆಯ ಸಿಬ್ಬಂದಿ ಗಸ್ತಿಗೆ ತೆರಳಿದ ಸಮಯದಲ್ಲಿ ಚಿರತೆ ಸಾವನ್ನಪ್ಪಿರುವುದು ಗೊತ್ತಾಗಿದೆ.
ಘಟನೆ ಕುರಿತು ಪ್ರಾದೇಶಿಕ ಅರಣ್ಯ ವಲಯದ ಕಚೇರಿಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರಡಿ ವನ್ಯಜೀವಿ ಅಪರಾಧದಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ.ಭಾಸ್ಕರ್, ವಲಯ ಅರಣ್ಯಾಧಿಕಾರಿ ಕೌಶಿಕ್ ದಳವಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಚಿರತೆಯ ಸಾವಿನ ಬಗ್ಗೆ ನಿಖರತೆ ತಿಳಿಯಲು ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಕಾನೂನು ಪ್ರಕಾರ ಅರಣ್ಯ ಪ್ರದೇಶದಲ್ಲಿ ವಿಲೇವಾರಿ ಮಾಡಿದ್ದಾರೆ.ಇದನ್ನೂ ಓದಿ:ಜಿಮ್ ಟ್ರೈನರ್‌ನಿಂದ ಲವ್ ಜಿಹಾದ್ – ಹಿಂದೂ ಯುವತಿಯರೇ ಟಾರ್ಗೆಟ್, ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್

