ಅಮರಾವತಿ: ಮೂರು ವರ್ಷದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರವೆಸಗಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ (Andhra Pradesh) ತಿರುಪತಿ (Tirupati) ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿ ವಾಸವಿದ್ದ ಕಾಲೋನಿಯಲ್ಲೇ ವಾಸವಿದ್ದ 22ರ ಹರೆಯದ ಆರೋಪಿ ಶುಕ್ರವಾರ ಮಗುವಿಗೆ ಚಾಕೊಲೇಟ್ ಕೊಡಿಸಿ ಗದ್ದೆಗೆ ಕರೆದೊಯ್ದಿದ್ದ. ಬಳಿಕ ಆಕೆಯನ್ನು ಕೊಂದು ಶವವನ್ನು ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ಚುನಾವಣಾ ಕಾರ್ಯತಂತ್ರಕ್ಕೆ 100 ಕೋಟಿ ಶುಲ್ಕ ಪಡೆಯುತ್ತೇನೆ: ಪ್ರಶಾಂತ್ ಕಿಶೋರ್
ಬಾಲಕಿ ಮನೆಗೆ ಬಾರದೇ ಇದ್ದಾಗ ಆಕೆಯ ಪೋಷಕರು ಆಕೆಗಾಗಿ ಹುಡುಕಾಟ ಆರಂಭಿಸಿದ್ದು, ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಚಕಮಕಿ
ಮೃತದೇಹವನ್ನು ಹೊಲದಿದಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ನಗರಿ ಶಾಸಕ ಗಾಲಿ ಭಾನು ಪ್ರಕಾಶ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: Mumbai | ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರನನ್ನು ಭಾರತಕ್ಕೆ ಕರೆತರಲು ತಯಾರಿ ಶುರು