ತಿರುವನಂತಪುರ: ಕೇರಳದ ಮೂರು ವರ್ಷದ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮಗುವಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಪ್ರಯೋಗಾಲಯದ ವರದಿಯಲ್ಲಿ ದೃಢಪಡಿಸಲಾಗಿದೆ. ಕೊರೊನಾ ಸೋಂಕು ಪೀಡಿತರ ಸಂಖ್ಯೆ ಕೇರಳದಲ್ಲಿ 9 ಮತ್ತು ದೇಶದಲ್ಲಿ 42ಕ್ಕೆ ಏರಿಕೆಯಾಗಿದೆ.
ಕೆಲವು ದಿನಗಳ ಹಿಂದೆ ಮಗು ಪೋಷಕರ ಜೊತೆ ಇಟಲಿಗೆ ತೆರಳಿತ್ತು. ಹೀಗಾಗಿ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಎರ್ನಾಕುಲಂ ಮೆಡಿಕೆಲ್ ಕಾಲೇಜಿನ ಐಸೋಲೇಶನ್ ವಾಡ್ ನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
Advertisement
Kerala: One 3-year-old child who recently travelled to Italy has been tested positive for #CoronaVirus. The child has been kept in isolation ward at Ernakulam Medical College pic.twitter.com/CVSD5Hn5AS
— ANI (@ANI) March 9, 2020
Advertisement
ಬೆಂಗಳೂರಿನಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್‍ಕೆಜಿ, ಯುಕೆಜಿ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ಯುಕೆಜಿ, ಎಲ್‍ಕೆಜಿ ಶಾಲೆಗಳಿಗೆ ಇಂದಿನಿಂದ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.