ಬೆಳಗಾವಿ: ಒಂದೆಡೆ ಅಮ್ಮಾ ಬಾ ಎಂದು ಬೀದಿಯಲ್ಲಿ ನಿಂತು ಕಣ್ಣೀರು ಹಾಕುತ್ತಲೇ ಕರೆಯುತ್ತಿರುವ ಮಗು, ಇನ್ನೊಂದೆಡೆ ಕೊರೊನಾ ಸೋಂಕಿತ ವಾರ್ಡಿನಲ್ಲಿ ಕೆಲಸ ಮಾಡುತ್ತಿದ್ದ ಸ್ಟಾಫ್ ನರ್ಸ್ ತಮ್ಮ ಮಗಳ ಬಳಿ ಹೋಗಲಾಗದೇ ದೂರ ನಿಂತು ಮರುಗಿದ ದೃಶ್ಯ ನೋಡಿದರೆ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುತ್ತದೆ.
Advertisement
ಬೆಳಗಾವಿಯಲ್ಲಿ ಸದ್ಯ 7 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ನರ್ಸ್‍ಗಳು ಮತ್ತು ವೈದ್ಯರು ಮನೆ ಹೋಗುತ್ತಿಲ್ಲ. ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಹಿನ್ನೆಲೆ ವೈದ್ಯರು ಹಾಗೂ ಸ್ಟಾಫ್ ನರ್ಸ್‍ಗಳನ್ನೇ ಜಿಲ್ಲಾಡಳಿತ ಹೋಟೆಲ್ ಕ್ವಾರಂಟೈನ್ ಮಾಡಿದೆ. ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ನಿವಾಸಿ ಸುನಂದಾ ಕೊರೆಪುರ್ ಅವರು ಭೀಮ್ಸ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸೋಂಕಿತರಿಗೆ ಹಾಗೂ ಶಂಕಿತರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಸ್ಟಾಫ್ ನರ್ಸ್‍ಗಳಲ್ಲಿ ಸುನಂದಾ ಕೂಡ ಒಬ್ಬರು. ಹೀಗಾಗಿ ಇತರೆ ವೈದ್ಯಕೀಯ ಸಿಬ್ಬಂದಿ ಜೊತೆಗೆ ಸುನಂದಾ ಕೂಡ ಕ್ವಾರಂಟೈನಲ್ಲಿ ಇದ್ದಾರೆ. ಆದ್ದರಿಂದ ಕೆಲ ದಿನಗಳಿಂದ ಮನೆಗೆ ಹೋಗಿಲ್ಲ.
Advertisement
Advertisement
ಆದರೆ ಮನೆಗೆ ಬಾರದ ತಾಯಿ ನೆನೆದು ಸುನಂದಾ ಅವರ 3 ವರ್ಷದ ಮಗಳು ಐಶ್ವರ್ಯ ಕಣ್ಣೀರು ಹಾಕುತ್ತಿದ್ದಾಳೆ. ಕಳೆದ 15 ದಿನಗಳಿಂದ ಮನೆ ಹೋಗದ ಸುನಂದಾ ಅವರನ್ನು ನೆನೆದು ಮಗಳು ಪ್ರತಿದಿನ ಮನೆಯಲ್ಲಿ ಕಣ್ಣಿರು ಹಾಕುತ್ತಿದ್ದಾಳೆ. ರಾತ್ರಿಯಾದ್ರೆ ಅಮ್ಮನಿಗಾಗಿ ಊಟ ಬಿಟ್ಟು ಐಶ್ವರ್ಯ ಅಳುತ್ತಿರುತ್ತಾಳೆ. ಹೀಗಾಗಿ ಮಗಳ ಅಳಲನ್ನು ನೋಡಲಾಗದೇ ಇಂದು ತಂದೆ ಸಂತೋಷ ಅಮ್ಮನ ಮುಖ ತೋರಿಸಲು ಐಶ್ವರ್ಯಳನ್ನು ಸುನಂದಾ ಅವರು ಇದ್ದ ಸ್ಥಳಕ್ಕೆ ಕರೆದುಕೊಂಡು ಬಂದಿದ್ದರು.
Advertisement
ದೂರದಿಂದಲೇ ತಾಯಿಯನ್ನು ಐಶ್ವರ್ಯಗೆ ತೋರಿಸಿದರು. ಈ ವೇಳೆ ಬೈಕ್ ಮೇಲೆ ಇದ್ದ ಐಶ್ವರ್ಯ ರಸ್ತೆಯಲ್ಲಿಯೇ ಅಮ್ಮಗಾಗಿ ಕಣ್ಣೀರು ಹಾಕಿದ್ದಾಳೆ. ಬಾ ಅಮ್ಮ ಮನೆಗೆ ಹೋಗೋಣ ಎಂದು ಗೋಳಾಡಿದ್ದಾಳೆ. ಇತ್ತ ಸುನಂದಾ ಅವರು ಮಗಳ ಬಳಿ ಹೋಗಲಾಗದೇ, ಮಗಳ ಕಣ್ಣೀರು ಒರೆಸಲಾಗದೇ ನೊಂದಿದ್ದಾರೆ. ಈ ದೃಶ್ಯ ನೋಡಿ ಬೆಳಗಾವಿ ಜನರು ಮಮ್ಮಲ ಮರುಗಿದ್ದಾರೆ.