ತುಮಕೂರು: 2023 ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದೆ. ಇದರ ಪ್ರಯುಕ್ತ ʻಸಾರ್ಥಕ ಸೇವೆಗಳ ಸಮರ್ಪಣೆ ಸಾಧನಾ ಸಮಾವೇಶʼ (Congress Sadhana Samavesha) ಇಂದು ತುಮಕೂರಿನಲ್ಲಿ ನಡೆಯುತ್ತಿದೆ.
ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ
ರಾಜ್ಯದ ಜನರ ವಿಶ್ವಾಸದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸಿದೆ. ಪಂಚ ಗ್ಯಾರಂಟಿ ಮಾತ್ರವಲ್ಲದೆ, ಇತರೆ ಭರವಸೆಗಳನ್ನು ಈಡೇರಿಸಿ ಜನರ ವಿಶ್ವಾಸ ಉಳಿಸಿಕೊಂಡಿರುವ ಸಾರ್ಥಕತೆ ಕಾಂಗ್ರೆಸ್ ಸರ್ಕಾರದ್ದಾಗಿದೆ. pic.twitter.com/j5ieow1moh
— Karnataka Congress (@INCKarnataka) May 19, 2026
ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಲಾದ ಬೃಹತ್ ವೇದಿಕೆ ಸಮಾವೇಶ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಇಡೀ ಸಂಪುಟದ ಸಚಿವರು ಪಾಲ್ಗೊಂಡಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಇದನ್ನೂ ಓದಿ: ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ – ಮುಷ್ಕರ ಮಾಡದಂತೆ ಖಡಕ್ ಸೂಚನೆ
ಕಲ್ಪತರು ನಾಡಿನಲ್ಲಿ ಕಾಂಗ್ರೆಸ್ ಸರ್ಕಾರದ ಭೂ ಗ್ಯಾರಂಟಿ
ಕಾಂಗ್ರೆಸ್ ಸರ್ಕಾರದ ದಕ್ಷ ಆಡಳಿತದಲ್ಲಿ ತುಮಕೂರು ಜಿಲ್ಲೆಯಲ್ಲಿ ಕಂದಾಯ ಇಲಾಖೆ ಮೂಲಕ ಕ್ರಾಂತಿ ಮಾಡಿದೆ. ಲಕ್ಷಾಂತರ ಜನರಿಗೆ ಆಸ್ತಿ ದಾಖಲೆಗಳನ್ನು ಒದಗಿಸುವ ಮೂಲಕ ಅವರ ಆಸ್ತಿ ಹಾಗೂ ಬದುಕಿಗೆ ಭದ್ರತೆ ಒದಗಿಸಿದೆ. pic.twitter.com/c9gI5meQNG
— Karnataka Congress (@INCKarnataka) May 19, 2026
ಹಕ್ಕುಪತ್ರ ವಿತರಣೆ
ಇನ್ನೂ ಇದೇ ಸಮಾವೇಶದಲ್ಲಿ 1 ಲಕ್ಷ 52 ಸಾವಿರ ಜನರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ. 684 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಲಾಗುತ್ತಿದೆ. ಜೊತೆಗೆ ನೂತನವಾಗಿ ಆಯ್ಕೆಯಾದ 600 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರಗಳನ್ನೂ ವಿತರಿಸಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗಳಿಗೆ ಭಾರೀ ಡಿಮ್ಯಾಂಡ್
ಇನ್ನೊಂದೆಡೆ, ಸಾಧನಾ ಸಮಾವೇಶವನ್ನು ಖಂಡಿಸಿ ಕೆಎಸ್‌ಆರ್‌ಟಿಸಿ ನೌಕರರ ಒಕ್ಕೂಟ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಕಪ್ಪು ಬಾವುಟ ಪ್ರದರ್ಶಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಸಿದ್ಧತೆ ನಡೆಸಲಾಗಿದೆ. ಶಕ್ತಿ ಯೋಜನೆ ಯಶಸ್ಸಿಗೆ ಕಾರಣರಾದ ಚಾಲಕ ಮತ್ತು ನಿರ್ವಾಹಕರನ್ನು ಸರ್ಕಾರ ಕಡೆಗಣಿಸಿದೆ ಎಂಬ ಆರೋಪದ ಹಿನ್ನೆಲೆ ಈ ಪ್ರತಿಭಟನೆ ನಡೆಯಲಿದೆ.

