ನವದೆಹಲಿ: ವಿರೋಧ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಪ್ರಧಾನಿ ಮೋದಿ (PM Narendra Modi) ಅವರನ್ನು ಸೋಲಿಸಲು ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದರೆ ಇನ್ನೊಂದು ಕಡೆಯಲ್ಲಿ ಬಿಜೆಪಿ (BJP) ಸಂಘಟನಾ ಅನುಕೂಲಕ್ಕಾಗಿ ಮೂರು ವಲಯಗಳನ್ನಾಗಿ ವಿಂಗಡಿಸಿ ಸಭೆ ನಡೆಸಲು ಮುಂದಾಗಿದೆ.
ಉತ್ತರ, ದಕ್ಷಿಣ ಮತ್ತು ಪೂರ್ವ ವಲಯಗಳನ್ನು ಗುರುತಿಸಲಾಗಿದ್ದು ಈ ಪ್ರದೇಶಗಳ ಪ್ರತ್ಯೇಕ ಸಭೆಗಳು ಜುಲೈ 6, 7 ಮತ್ತು 8 ರಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Advertisement
ಜಮ್ಮು-ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಚಂಡೀಗಢ, ರಾಜಸ್ಥಾನ, ಗುಜರಾತ್, ದಮನ್ ದಿಯು-ದಾದ್ರಾ ಮತ್ತು ನಗರ ಹವೇಲಿ, ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ಉತ್ತರಾಖಂಡ, ದೆಹಲಿ ಮತ್ತು ಹರ್ಯಾಣವನ್ನು ಉತ್ತರ ವಲಯದಲ್ಲಿ ಇರಿಸಲಾಗಿದೆ. ಜುಲೈ 7 ರಂದು ದೆಹಲಿಯಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.
Advertisement
Advertisement
ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಅಸ್ಸಾಂ, ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ ಮತ್ತು ತ್ರಿಪುರ ರಾಜ್ಯಗಳು ಪೂರ್ವ ವಲಯದಲ್ಲಿದ್ದು ಇದರ ಸಭೆ ಜುಲೈ 6 ರಂದು ಗುವಾಹಟಿಯಲ್ಲಿ ನಡೆಯಲಿದೆ. ಇದನ್ನೂ ಓದಿ: ಸೋಲಿನ ಅಶಾಂತಿಯಿಂದ ಬಿಜೆಪಿಯೊಳಗೆ ಶಾಂತಿ ಸಭೆ – ಶಿಸ್ತಿನ ಗೆರೆ ಎಳೆದ ಬಿಜೆಪಿ ನಾಯಕರು
Advertisement
ಕೇರಳ, ತಮಿಳುನಾಡು, ಪುದುಚೇರಿ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮುಂಬೈ, ಗೋವಾ, ಅಂಡಮಾನ್ ಮತ್ತು ನಿಕೋಬಾರ್ ಮತ್ತು ಲಕ್ಷದ್ವೀಪ ದಕ್ಷಿಣ ವಲಯದಲ್ಲಿದ್ದು, ಈ ರಾಜ್ಯಗಳ ಸಭೆ ಜುಲೈ 8 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ.
ಈ ಸಭೆಗಳಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಸಂಘಟನಾ ಕಾರ್ಯದರ್ಶಿ ಸೇರಿದಂತೆ ಆ ಭಾಗದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಈ ಸಭೆಗಳಲ್ಲಿ ಆಯಾ ರಾಜ್ಯಗಳ ಉಸ್ತುವಾರಿಗಳು, ರಾಜ್ಯಾಧ್ಯಕ್ಷರು, ಸಂಘಟನಾ ಕಾರ್ಯದರ್ಶಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಸದರು, ಶಾಸಕರು ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಸಹ ಭಾಗವಹಿಸಲಿದ್ದಾರೆ.
ರಾಷ್ಟ್ರೀಯ ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಒತ್ತು ನೀಡಿ ವಿಭಿನ್ನ ಕಾರ್ಯತಂತ್ರ ನಡೆಸಲು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಈ ಸಭೆಗಳಲ್ಲಿ ಸಂಬಂಧಪಟ್ಟ ಮುಖಂಡರಿಗೆ ಬಿಜೆಪಿ ಹೊಸ ಜವಾಬ್ದಾರಿಗಳನ್ನೂ ನೀಡಲಿದೆ ಎಂದು ವರದಿಯಾಗಿದೆ.
Web Stories