ಪಾಟ್ನಾ: ಮಳೆ ನೀರನ್ನು ಶೇಖರಣೆ ಮಾಡಲು ಬಿಹಾರದ ರೈತರೊಬ್ಬರು ಬ್ಬರು 3 ಕಿ.ಮೀ ಉದ್ದದ ಕಾಲುವೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ಅವರು ಆಧುನಿಕ ಭಗೀರಥ ಎಂದೆನಿಸಿಕೊಂಡಿದ್ದಾರೆ.
ಈ ಆಧುನಿಕ ಭಗೀರಥನನ್ನು ಲೌಂಗಿ ಭುಯಿಯಾನ್ ಎಂದು ಗುರುತಿಸಲಾಗಿದೆ. ಇವರು ಬರೋಬ್ಬರಿ 30 ವರ್ಷಗಳಿಂದ ತನ್ನ ಗ್ರಾಮದ ಜಮೀನಿಗಳಿಗೆ ನೆರವಾಗಲು ಕಾಲುವೆ ನಿರ್ಮಿಸಿದ್ದಾರೆ. ಗಯಾದ ಲಥುವಾ ಏರಿಯಾದಲ್ಲಿ ಬರುವ ಕೊಥಿಲವಾ ಗ್ರಾಮ ನಿವಾಸಿಯಾಗಿರುವ ಲೌಂಗಿ, ಗ್ರಾಮದ ಜನ ನೀರಿನ ಅಭಾವ ಎದುರಿಸುತ್ತಿದ್ದರು. ಇದನ್ನು ತಪ್ಪಿಸಲೆಂದು ಸಮೀಪದ ಬೆಟ್ಟದ ಇಳಿಜಾರಿಗೆ ಅನುಗುಣವಾಗಿ ಕಾಲುವೆ ಮಾಡಿ ಮಳೆ ನೀರು ಹರಿದು ಕೆರೆಗೆ ಸೇರುವಂತೆ ಮಾಡಿ ಸೈ ಎನಿಸಿಕೊಂಡಿದ್ದಾರೆ.
Advertisement
Bihar: A man has carved out a 3-km-long canal to take rainwater coming down from nearby hills to fields of his village, Kothilawa in Lahthua area of Gaya. Laungi Bhuiyan says, "It took me 30 years to dig this canal which takes the water to a pond in the village." (12.09.2020) pic.twitter.com/gFKffXOd8Y
— ANI (@ANI) September 12, 2020
Advertisement
ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಲೌಂಗಿ, ಈ ಕಾಲುವೆಯನ್ನು ಅಗೆಯಲು ನನಗೆ ಬರೋಬ್ಬರಿ 30 ವರ್ಷಗಳು ಬೇಕಾಯಿತು. ಈ ಕಾಲುವೆ ನೀರು ಹಳ್ಳಿಯ ಕೊಳಕ್ಕೆ ಸೇರಿ ಅಲ್ಲಿ ಶೇಖರಣೆಯಾಗುತ್ತದೆ ಎಂದು ತಿಳಿಸಿದ್ದಾರೆ.
Advertisement
ಕಳೆದ 30 ವರ್ಷಗಳಿಂದ ನಾನು ನನ್ನ ದನಗಳನ್ನು ಮೇಯಲು ಕರೆದುಕೊಂಡು ಹೋಗುತ್ತಿದ್ದೆ. ಹೀಗೆ ಹೋದವನು ದಿನಾ ಸ್ವಲ್ಪ ಸ್ವಲ್ಪ ಕಾಲುವೆಯನ್ನು ಅಗೆಯುತ್ತಿದ್ದೆ. ಈ ವೇಳೆ ನನಗೆ ಯಾರೂ ಸಹಾಯ ಮಾಡಲಿಲ್ಲ. ಗ್ರಾಮದ ಜನ ತಮ್ಮ ಜೀವನೋಪಾಯಕ್ಕಾಗಿ ಹಳ್ಳಿ ತೊರೆದು ನಗರದ ಕಡೆ ಮುಖ ಮಾಡುತ್ತಿದ್ದಾರೆ. ಆದರೆ ನಾನು ಆ ರೀತಿ ಮಾಡದೇ ಹಳ್ಳಿಯಲ್ಲೇ ಉಳಿದುಕೊಳ್ಳಲು ನಿರ್ಧರಿಸಿರುವುದಾಗಿ ಲೌಂಗಿ ಹೇಳಿದ್ದಾರೆ.
Advertisement
ಕೋತಿಲ್ವಾ ಗ್ರಾಮವು ಗಯಾ ಜಿಲ್ಲೆಯಿಂದ 80 ಕಿ.ಮೀ ದೂರದಲ್ಲಿರುವ ದಟ್ಟವಾದ ಕಾಡು ಹಾಗೂ ಪರ್ವತಗಳಿಂದ ಆವೃತವಾಗಿದೆ. ಗಯಾದಲ್ಲಿನ ಜನರ ಜೀವನೋಪಾಯದ ಮುಖ್ಯ ಸಾಧನವೆಂದರೆ ಕೃಷಿ ಮತ್ತು ಪಶುಸಂಗೋಪನೆ ಆಗಿದೆ. ಮಳೆಗಾಲದಲ್ಲಿ ಪರ್ವತಗಳಿಂದ ಬೀಳುವ ನೀರು ನದಿಗೆ ಹರಿಯುತ್ತಿತ್ತು. ಇದು ಲೌಂಗಿ ಅವರನ್ನು ಸಾಕಷ್ಟು ಕಾಡುತ್ತಿದ್ದು, ಹೀಗಾಗಿ ಅವರು ಕಾಲುವೆ ತೋಡಲು ನಿರ್ಧಾರ ಮಾಡಿದರು.
ಒಟ್ಟಿನಲ್ಲಿ ಲೌಂಗಿ ಮಾಡಿರುವ ಈ ಘನ ಕಾರ್ಯ ಇಂದು ಅನೇಕ ಪ್ರಾಣಿಗಳಿಗೆ ಸಹಾಯವಾಗಿದೆ. ಅಲ್ಲದೆ ಹೊಲಗಳಿಗೂ ಪ್ರಯೋಜನವಾಗಿದೆ. ವಿಶೇಷ ಅಂದರೆ ಲೌಂಗಿ ತನ್ನ ಸ್ವಂತ ಲಾಭಕ್ಕಾಗಿ ಕಾಲುವೆ ನಿರ್ಮಿಸಿಲ್ಲ. ಬದಲಾಗಿ ಇಡೀ ಗ್ರಾಮಕ್ಕಾಗಿ ಈ ಕೆಲಸ ಮಾಡಿದ್ದು, ಪ್ರಸ್ತುತ ಲೌಂಗಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
For the last 30 years, I would go to the nearby jungle to tend my cattle & dig out the canal. No one joined me in this endeavour… Villagers are going to cities to earn a livelihood but I decided to stay back: Laungi Bhuiyan who has dug out a canal single-handedly in Gaya(12.09) https://t.co/pfaJxa00G5
— ANI (@ANI) September 12, 2020