ವಯನಾಡ್: ವಯನಾಡ್‌ನಲ್ಲಿ (Wayanad) ಪ್ರಿಯಾಂಕಾ ಗಾಂಧಿ (Priyanka Gandhi), ರಾಹುಲ್ ಗಾಂಧಿ (Rahul Gandhi), ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭಾವಚಿತ್ರ ಇರುವ 30 ರೇಶನ್ ಕಿಟ್‌ಗಳನ್ನು ಜಪ್ತಿ ಮಾಡಲಾಗಿದೆ.
ವಯನಾಡ್ ಲೋಕಸಭೆ ಉಪಚುನಾವಣೆಗೆ 6 ದಿನ ಬಾಕಿ ಇದೆ. ಈ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದಾರೆ. ಅವರ ಚಿತ್ರವಿರುವ ಆಹಾರ ಕಿಟ್‌ಗಳು ಗುರುವಾರ ಪತ್ತೆಯಾಗಿದ್ದು, ಚುನಾವಣಾ ಆಯೋಗವು ವಶಪಡಿಸಿಕೊಂಡಿದೆ.
ವಯನಾಡಿನ ತೋಲ್ಪೆಟ್ಟಿಯಲ್ಲಿ ಕಾಂಗ್ರೆಸ್‌ಗೆ (Congress) ಸೇರಿದ ಆಹಾರ ಕಿಟ್‌ಗಳು ಸಿಕ್ಕಿದ್ದು, ಇಲ್ಲಿನ ಮನೆಯೊಂದರಲ್ಲಿ ಮತದಾರರಿಗೆ ಹಂಚಲು ಕಿಟ್‌ಗಳ ಸಿದ್ಧ ಮಾಡಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಚುನಾವಣಾ ನಿಯಂತ್ರಣ ತಂಡ ದಾಳಿ ಮಾಡಿದೆ. ತಪಾಸಣೆಯಲ್ಲಿ ಕಾಂಗ್ರೆಸ್ ಮುಖಂಡ ಶಶಿಕುಮಾರ್ ತೋಲ್ಪೆಟ್ಟಿ ಮನೆಯ ಪಕ್ಕದ ಕೊಠಡಿಯಲ್ಲಿ ಈ ಕಿಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು 30 ಆಹಾರ ಕಿಟ್‌ಗಳು ಸಿಕ್ಕಿದ್ದು, ಟೀ ಪುಡಿ, ಸಕ್ಕರೆ, ಅಕ್ಕಿ ಮತ್ತು ಇತರ ದಿನಸಿ ಪದಾರ್ಥಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ
ಕಿಟ್‌ಗಳ ಮೇಲೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವರ ಚಿತ್ರಗಳಿವೆ. ಇವನ್ನು ಇತ್ತೀಚೆಗೆ ಭೂಕುಸಿತ ಉಂಟಾದ ಪ್ರದೇಶಗಳಾದ ಮೆಪ್ಪಾಡಿ, ಮುಂಡಕೈ ಮತ್ತು ಚೂರ್ಲಮಾಲ ಸಂತ್ರಸ್ತರಿಗೆ ವಿತರಿಸುವುದಕ್ಕೆ ಯೋಜಿಸಲಾಗಿತ್ತು. ಕಿಟ್ ಮೇಲೆ ಭೂಕುಸಿತ ಸಂತ್ರಸ್ತರಿಗೆ ಎಂದು ಕೂಡ ಬರೆದಿದೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಟ್ರಂಪ್, ಸೋತ ಹ್ಯಾರಿಸ್‌ಗೆ ರಾಹುಲ್ ಗಾಂಧಿ ಪತ್ರ
ಪೊಲೀಸರು ಕಿಟ್‌ಗಳನ್ನು ವಶಪಡಿಸಿಕೊಂಡ ಮೇಲೆ ರಾಜಕೀಯ ಪ್ರತಿಪಕ್ಷಗಳ ಟೀಕೆ ಹೆಚ್ಚಾಗಿದೆ. ಮತಕ್ಕಾಗಿ ಕಾಂಗ್ರೆಸ್ ಕಿಟ್‌ಗಳನ್ನು ವಿತರಿಸುತ್ತಿದೆ ಎಂದು ಆರೋಪಿಸಿವೆ. ಇದು ಭೂಕುಸಿತದ ಸಂತ್ರಸ್ತರಿಗೆ ವಿತರಿಸಲು ಈ ಹಿಂದೆ ತಂದಿದ್ದ ಕಿಟ್‌ಗಳು ಎಂದು ಕಾಂಗ್ರೆಸ್ ಹೇಳಿದೆ. ಇದನ್ನೂ ಓದಿ: ವಕ್ಫ್ ನೋಟಿಸ್‌ನಿಂದ ರೈತ ಆತ್ಮಹತ್ಯೆ ಆರೋಪ – ಪೋಸ್ಟ್ ಹಾಕಿದ್ದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್