– ಬಸಂತ ಪಂಚಮಿ ತಯಾರಿ ಪರಿಶೀಲನೆ
ಲಕ್ನೋ: ಮಹಾ ಕುಂಭಮೇಳದಲ್ಲಿ (Maha Kumbh Mela) ಕಾಲ್ತುಳಿತಕ್ಕೆ (Stampede) 30 ಮಂದಿ ಸಾವು ಕಂಡ ಹಿನ್ನೆಲೆ ಇಂದು ಪ್ರಯಾಗರಾಜ್‌ಗೆ (Prayagraj) ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಫೆ.3ರಂದು ಬಸಂತ ಪಂಚಮಿ ಹಿನ್ನೆಲೆ ಮತ್ತೊಂದು ಅಮೃತ ಸ್ನಾನ ನಡೆಯಲಿದೆ. ಈ ಹಿನ್ನೆಲೆ ಯೋಗಿ ಆದಿತ್ಯನಾಥ್ (Yogi Adityanath) ತಯಾರಿ ಪರಿಶೀಲನೆ ನಡೆಸಲಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಕ್ರಿಕೆಟ್ ಟೂರ್ನಿ – ಪಬ್ಲಿಕ್ ವಾರಿಯರ್ಸ್ ಚಾಂಪಿಯನ್
ಫೆ.1ರಂದು 50ಕ್ಕೂ ಹೆಚ್ಚು ದೇಶಗಳ ಉಪಾಧ್ಯಕ್ಷರು ಹಾಗೂ ರಾಯಭಾರಿಗಳು ಆಗಮಿಸಲಿದ್ದಾರೆ. ಫೆ.5ರಂದು ಪ್ರಧಾನಿ ನರೇಂದ್ರ ಮೋದಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಈ ಹಿನ್ನೆಲೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಯೋಗಿ ಖುದ್ದು ಪ್ರಯಾಗ್‌ರಾಜ್‌ಗೆ ತೆರಳಿ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದಾರೆ. ಇದನ್ನೂ ಓದಿ: ರಾಯಚೂರಲ್ಲಿ ಅಮಾನವೀಯ ಘಟನೆ – ಮರಕ್ಕೆ ಕಟ್ಟಿ ಮಹಿಳೆ ಮೇಲೆ ಮನಬಂದಂತೆ ಹಲ್ಲೆ
ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯ ಬಗ್ಗೆ ಭಾರೀ ಬೇಸರ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. ಅದರೊಂದಿಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಘಟನೆಯಲ್ಲಿ ಒಟ್ಟು 30 ಮಂದಿ ಸಾವು ಕಂಡಿದ್ದನ್ನು ಖಚಿತಪಡಿಸಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟ ವ್ಯಕ್ತಿಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಇದನ್ನೂ ಓದಿ: ಕುಂಭಮೇಳ ಕಾಲ್ತುಳಿತ ದುರಂತ – ಕನ್ನಡಿಗರ ನೆರವಿಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ