ಇಸ್ಲಾಮಾಬಾದ್: ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟಿಸಿದ್ದು, 30 ಮಂದಿ ಸಾವನ್ನಪಿದ್ದು, 50 ಮಂದಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಾಕಿಸ್ತಾನದ ಪೇಶಾವರದಲ್ಲಿ ಇಂದು ಪ್ರಾರ್ಥನೆಯ ಸಮಯದಲ್ಲಿ ಬಾಂಬ್ ಸ್ಫೋಟಿಸಿದ್ದು, ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ. ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದಾಗ ಬಾಂಬ್ ಸ್ಫೋಟಿಸಿದೆ. ಘಟನೆಯಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ
Advertisement
At least 30 killed and over 50 injured in blast at a mosque during Friday prayers in Peshawar, #Pakistan. pic.twitter.com/JIcOrswPGR
— Ahmer Khan (@ahmermkhan) March 4, 2022
Advertisement
ಪ್ರಾರ್ಥನೆಯ ವೇಳೆ ಇಬ್ಬರು ದಾಳಿಕೋರರು ಮಸೀದಿ ಪ್ರವೇಶಿಸಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ಬಳಿಕ ಬಾಂಬ್ ಸ್ಫೋಟ ನಡೆದಿದೆ. ಕಿಸಾ ಖ್ವಾನಿ ಬಜಾರ್ ಪ್ರದೇಶದಲ್ಲಿರುವ ಜಾಮಿಯಾ ಮಸೀದಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಗುಂಡ್ಲುಪೇಟೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಗುಡ್ಡ ಕುಸಿತ – ಇಬ್ಬರು ಗಣಿ ಕಾರ್ಮಿಕರು ಸಾವು?
Advertisement
Atleast 30 people killed and more than 50 injured in a bomb explosion during Friday prayers at a mosque in Peshawar, Pakistan: Geo News pic.twitter.com/ZMaIZ7UVOg
— ANI (@ANI) March 4, 2022
Advertisement
ಇಬ್ಬರು ದಾಳಿಕೋರರು ಮಸೀದಿಗೆ ಪ್ರವೇಶಿಸಲು ಪ್ರಯತ್ನಿಸಿದರು ಮತ್ತು ಕಾವಲು ನಿಂತ ಪೊಲೀಸರ ಮೇಲೆ ಗುಂಡು ಹಾರಿಸಿದರು. ಗಾಯಗೊಂಡಿರುವ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಾಜಧಾನಿ ನಗರ ಪೊಲೀಸ್ ಅಧಿಕಾರಿ ಪೇಶಾವರ್ ಇಜಾಜ್ ಅಹ್ಸಾನ್ ಹೇಳಿದ್ದಾರೆ.