– ಒಟ್ಟು 2 ಹಂತದಲ್ಲಿ ಮೋದಿ ಸಂಪುಟ ರಚನೆ
– ಮಹತ್ವದ ಖಾತೆಗಳನ್ನು ತನ್ನ ಬಳಿಯೇ ಇಟ್ಟುಕೊಳ್ಳಲಿದೆ ಬಿಜೆಪಿ
ನವದೆಹಲಿ: ತೀಸ್ರೀ ಬಾರ್ ಮೋದಿ ಸರ್ಕಾರ್ (Modi Sarkar) ಎಂಬ ಬಿಜೆಪಿಯ ನಿನಾದ ಕಡೆಗೂ ನಿಜವಾಗುತ್ತಿದೆ. ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ (NDA) ಸರ್ಕಾರ ರಚನೆ ಆಗುವುದಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ಕೌಂಟ್‌ಡೌನ್ ಶುರುವಾಗಿದೆ.
Advertisement
ಇಂದು ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ (Narendra Modi) ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಶಕೆ ಮತ್ತೆ ದೇಶದಲ್ಲಿ ಆರಂಭವಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ಸಾಧನೆ ಬಗ್ಗೆ ಎಐಸಿಸಿ ಅಸಮಾಧಾನ – ತಲೆದಂಡದ ಸುದ್ದಿ ಅಲ್ಲಗಳೆದ ಸಚಿವರು
Advertisement
Advertisement
ಮೋದಿ ಪ್ರಮಾಣ ಬೆನ್ನಲ್ಲೇ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಒಟ್ಟು ಎರಡು ಹಂತಗಳಲ್ಲಿ ಸಂಪುಟ ರಚನೆಯಾಗುವ ಸಾಧ್ಯತೆಯಿದ್ದು ಪ್ರಮಾಣವಚನ ಸಮಾರಂಭಕ್ಕಾಗಿ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿವೆ. ಪೂರ್ಣ ಪ್ರಮಾಣದ ಮಂತ್ರಿಮಂಡಲದ ಬಲವು 78 ಮತ್ತು 81 ರ ನಡುವೆ ಇರಬಹುದೆಂದು ನಿರೀಕ್ಷಿಸಲಾಗಿದೆ.
Advertisement
ಗೃಹ, ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳಂತಹ ಮಹತ್ವದ ಖಾತೆಗಳನ್ನು ಬಿಜೆಪಿ ಇಟ್ಟುಕೊಳ್ಳಲಿದ್ದು ಉಕ್ಕು, ನಾಗರಿಕ ವಿಮಾನಯಾನ ಮತ್ತು ಕಲ್ಲಿದ್ದಲು ಮುಂತಾದ ಖಾತೆಗಳು ಮಿತ್ರ ಪಕ್ಷಗಳಿಗೆ ಸಿಗುವ ಸಾಧ್ಯತೆಯಿದೆ. ಇಂದು ಬೆಳಗ್ಗೆಯಿಂದ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರಿಗೆ ಸರ್ಕಾರದಿಂದ ಕರೆಗಳು ಬರುವ ನಿರೀಕ್ಷೆಯಿದೆ.
ನೈಬರ್‌ಹುಡ್ ಫಸ್ಟ್ ಪಾಲಿಸಿ ಮತ್ತು ಸಾಗರ್ ವಿಷನ್ ಭಾಗವಾಗಿ ನೆರೆ-ಹೊರೆಯ ದೇಶಗಳ ಮುಖ್ಯಸ್ಥರನ್ನು ಆಮಂತ್ರಿಸಲಾಗಿದೆ. ಈಗಾಗಲೇ ಹಲವು ದೇಶಗಳ ಮುಖ್ಯಸ್ಥರು ನವದೆಹಲಿಗೆ ಆಗಮಿಸಿದ್ದಾರೆ.
ಮೋದಿ ಪದಗ್ರಹಣ ಸಮಾರಂಭಕ್ಕೆ ಕೆಲ ವಿಶೇಷ ವ್ಯಕ್ತಿಗಳು 8 ರಿಂದ 9 ಸಾವಿರ ಮಂದಿಯನ್ನು ಆಹ್ವಾನಿಸಲಾಗಿದೆ. ಜೂನ್ 13ರಿಂದ 15ರವರೆಗೂ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಇಟಲಿಗೆ ಮೊದಲ ಪ್ರವಾಸ ಕೈಗೊಳ್ಳಲಿದ್ದಾರೆ. 18ನೇ ಲೋಕಸಭೆಯ ಮೊದಲ ಸಮಾವೇಶ ಜೂನ್ 15ಕ್ಕೆ ಆರಂಭ ಆಗಬಹುದು ಎನ್ನಲಾಗಿದೆ.