ಮಂಡ್ಯ: ಚಾಮರಾಜನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಮದ್ದೂರಿನ ರುದ್ರಾಕ್ಷಿಪುರದ ಬಳಿ ಚಾಲಕನ ಅಜಾಗರೂಕತೆಯಿಂದ ಅಪಘಾತಕ್ಕೀಡಾಗಿದೆ. ಬಸ್ ಪಲ್ಟಿಯಾಗಿ (Bus Overturn) ಸುಮಾರು 33 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
Advertisement
ಇಂದು (ಜ.20) ಬೆಳಗ್ಗೆ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಬಸ್ ಚಲಿಸುತ್ತಿದ್ದ ವೇಳೆ ಚಾಲಕ ಅಚಾನಕ್ಕಾಗಿ ಹಿಂಬದಿ ತಿರುಗಿನೋಡಿದ್ದು, ಈ ವೇಳೆ ಚಕ್ರ ಡಿವೈಡರ್ ಮೇಲೆ ಹತ್ತಿದೆ. ಹೀಗಾಗಿ ಬಸ್ ಪಲ್ಟಿ ಹೊಡೆದಿದೆ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರ ಪೈಕಿ 30 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಪಾನೀಯದಲ್ಲಿ ವಿಷ ಬೆರೆಸಿ ಬಾಯ್‌ಫ್ರೆಂಡ್ ಕೊಲೆ ಮಾಡಿದ್ದ ಕೇರಳದ ಮಹಿಳೆಗೆ ಮರಣದಂಡನೆ
Advertisement
ಗಾಯಗೊಂಡಿರುವ ಪ್ರಯಾಣಿಕರಿಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಬಳಿಕ ಆಸ್ಪತ್ರೆಗೂ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ & ಕೊಲೆ ಕೇಸ್ – ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ
Advertisement
Advertisement
ಗಾಯಾಳುಗಳಿಗೆ ಹೆಚ್ಚುವರಿ ಚಿಕಿತ್ಸೆಯ ಅಗತ್ಯ ಬಿದ್ದರೆ ಮಿಮ್ಸ್ ಅಥವಾ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಿಸುವಂತೆ ಸೂಚನೆ ನೀಡಿದ್ದಾರೆ. ಒಂದು ವೇಳೆ ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೆ, ಅದರ ಖರ್ಚು ವೆಚ್ಚವನ್ನು ಕೆಎಸ್‌ಆರ್‌ಟಿಸಿ ವತಿಯಿಂದ ಭರಿಸುವಂತೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಗೋಮೂತ್ರದ ಔಷಧೀಯ ಗುಣಗಳನ್ನ ಪರಿಗಣಿಸಬೇಕು – ಐಐಟಿ ಮದ್ರಾಸ್ ನಿರ್ದೇಶಕ