ಹಾವೇರಿ: ಕುರಿ (Sheep) ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ (Fire Accident) ಬಿದ್ದು 30 ಕುರಿಗಳು ಸಜೀವ ದಹನವಾದ ಘಟನೆ ರಾಣೇಬೆನ್ನೂರು (Ranebennur) ತಾಲೂಕಿನ ಹರನಗಿರಿ ಗ್ರಾಮದಲ್ಲಿ ನಡೆದಿದೆ.
ಸಾವಿಗೀಡಾದ ಕುರಿಗಳು ಹುಚ್ಚಪ್ಪ ಮುದ್ದಿ ಎಂಬವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಈ ಘಟನೆ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಕೂಡಲೇ ಗ್ರಾಮಸ್ಥರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿದ್ದಾರೆ. ಇದನ್ನೂ ಓದಿ: ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ
ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸರ್ಕಾರ ಸೂಕ್ತವಾದ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಅನಾರೋಗ್ಯದಿಂದ ಮಾಲೀಕ ಹುಚ್ಚಪ್ಪ ಮುದ್ದಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

