ಹಾವೇರಿ: ವಿಷಕಾರಿ ಮೇವು ಸೇವಿಸಿದ ಹಿನ್ನೆಲೆಯಲ್ಲಿ 30 ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗುಡ್ಡದಚನ್ನಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾಗಪ್ಪ, ನಿಂಗಪ್ಪ ಮತ್ತು ಗುಡ್ಡಪ್ಪ ಸೇರಿದಂತೆ ಒಟ್ಟು ಆರು ಜನ ಕುರಿಗಾಹಿಗಳ ಕುರಿಗಳು ಸಾವನ್ನಪ್ಪಿವೆ. ಕುರಿಗಳನ್ನು ಮೇಯಿಸಲು ತೆರಳಿದ್ದ ವೇಳೆ ಕುರಿಗಳು ಮೃತಪಟ್ಟಿವೆ. ಸ್ಥಳಕ್ಕೆ ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯದಲ್ಲಿಯ ವಿಷ ಮೇವಿನ ಸೇವನೆಯಿಂದ ಕುರಿಗಳು ಮೃತಪಟ್ಟಿವೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.
ಅಧಿಕಾರಿಗಳು ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಈ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.