– ಬೆಳೆಗಳು ನೀರು ಪಾಲು, ರೈತರು ಕಂಗಾಲು
ಬೀದರ್: ಮಹಾರಾಷ್ಟ್ರದ ಧನ್ನೆಗಾಂವ್ ಜಲಾಶಯದಿಂದ ಮಾಂಜ್ರಾ ನದಿಗೆ 20 ರಿಂದ 30 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಮಾಂಜ್ರಾನದಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
Advertisement
ಭಾಲ್ಕಿ ತಾಲೂಕಿನ ವಾಂಜರ್ ಖೇಡ್ ಸೇತುವೆ ಸಂಪರ್ಕ ಕಡಿತಗೊಂಡಿದ್ದು, ವಾಂಜರ್ ಖೇಡ್ ಟು ಹಲಸಿತೂಗಾಂವ್ ಗ್ರಾಮದ ರಸ್ತೆ ಸಂಪರ್ಕ ಕಡಿತಗೊಂಡು ವಾಂಜರ್ ಖೇಡ್ ಸೇತುವೆ ಮೇಲಿಂದ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮತ್ತೆ ರಣ ಮಳೆ- ಪ್ರವಾಹ ಪರಿಸ್ಥಿತಿ
Advertisement
ಮಾಂಜ್ರಾ ನದಿಯ ದಡದಲ್ಲಿರುವ ಸಾಯಿಗಾಂವ್, ಕೊಗಳಿ, ಕೌಠ, ಚಂದಾಪೂರ್ ಸೇರಿದಂತೆ 20ಕ್ಕೂ ಹೆಚ್ಚು ಗ್ರಾಮದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿ ನೂರಾರು ಎಕರೆಯಲ್ಲಿ ಬೆಳೆದಿದ್ದ ವಿವಿಧ ಬೆಳೆಗಳು ಹಾನಿಯಾಗಿವೆ.
Advertisement
Advertisement
ಗುಲಾಬ್ ಚಂಡಮಾರುತದ ಎಫೆಕ್ಟ್ ನಿಂದಾಗಿ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಧನ್ನೆಗಾಂವ್ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡಲಾಗಿದೆ. ಪರಿಣಾಮ ಜಮೀನಿಗೆ ನೀರು ನುಗ್ಗಿ ಬೆಳೆಗಳು ಕೊಚ್ಚಿ ಹೋಗಿದ್ದು, ರೈತರು ಕಂಗಾಲಾಗಿದ್ದಾರೆ.