ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸವನಪುರ ಗೇಟ್ ಬಳಿ ಎರಡು ಖಾಸಗಿ ಬಸ್ ಹಾಗೂ ಒಂದು ಟೆಂಪೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುತ್ತಿದ್ದ 30ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದಾರೆ.
ಬಾಣಸಮುದ್ರ ಸಮೀಪದ ಗಾರ್ಮೆಂಟ್ಸ್‌ಗೆ ಮಹಿಳೆಯರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನಗಳ ನಡುವೆ ಈ ಅಪಘಾತ ನಡೆದಿದೆ. ಅಡ್ಡ ಬಂದ ಬೈಕ್‌ಗೆ ಡಿಕ್ಕಿ ತಪ್ಪಿಸಲು ಬಸ್ ಚಾಲಕ ಪ್ರಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ, ಮತ್ತೊಂದು ಬಸ್ ಹಾಗೂ ಟೆಂಪೋಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಾಯಗೊಂಡವರಲ್ಲಿ 17 ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ಪ್ರಾಣಾಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿ: ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ವಿಜಯೋತ್ಸವ
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಗಾಯಾಳುಗಳಿಗೆ ಯಾವುದೇ ಕೊರತೆಯಾಗದಂತೆ ಉತ್ತಮ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯ ವೈದ್ಯರು ಹಾಗೂ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.ಇದನ್ನೂ ಓದಿ: ಮನೆ ಕಟ್ಟಲು 15 ಲಕ್ಷ ಕೈಸಾಲ – ಇಬ್ಬರು ಮಕ್ಕಳೊಂದಿಗೆ ತಾಯಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ
