– ಸಿಎಂ ಆಪ್ತ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿದ್ದ ಬ್ಯಾಗ್ ನಾಪತ್ತೆ
ಬೆಂಗಳೂರು: ಶಕ್ತಿಸೌಧ ವಿಧಾನಸೌಧದಲ್ಲಿರುವ (Vidhana Soudha) ನಗರಾಭಿವೃದ್ಧಿ ಸಚಿವ ಸುರೇಶ್ (Byrati Suresh) ಅವರ ಕಚೇರಿಯಲ್ಲೇ ಕಳ್ಳತನ ನಡೆದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ಹೌದು. ಕೆಲಸದ ನಿಮಿತ್ತ ಸಚಿವರ ಕಚೇರಿಗೆ ನವೀನ್ ಎಂಬವರು ಚಿನ್ನಾಭರಣ (Gold) ಹಾಗೂ ನಗದು (Cash) ಇದ್ದ ಕೈ ಚೀಲದೊಂದಿಗೆ ಬಂದಿದ್ದರು. ಕೆಲಸ ಮುಗಿಸಿದ ತೆರಳುವಾಗ ಕೈ ಚೀಲವನ್ನು ಮರೆತು ಹೋಗಿದ್ದರು.
ಮಾರನೇ ದಿನ ಬಂದು ನೋಡಿದಾಗ ಕೈ ಚೀಲ ನಾಪತ್ತೆಯಾಗಿತ್ತು. 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕ್ಯಾಶ್ ಇದ್ದ ಕೈ ಚೀಲ ಕಳ್ಳತನವಾದ ಬೆನ್ನಲ್ಲೇ ಗಾಬರಿಗೊಂಡ ನವೀನ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ನನ್ನನ್ನು ನೋಡಿಕೊಳ್ಳದಿದ್ದರೆ ವಿಡಿಯೋ ಔಟ್ – ಕಮಲಾಕರ್ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್
ಸಚಿವರ ಕಚೇರಿಯಲ್ಲೇ ಕಳ್ಳತನ ನಡೆದ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ವಿಧಾನಸೌಧದ ಆಡಳಿತಾತ್ಮಕ ಮತ್ತು ಭದ್ರತಾ ವಿಷಯಗಳಿಗೆ ಸಂಬಂಧಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ (DPAR) ಡಿ ಗ್ರೂಪ್ ನೌಕರನ ಪಾತ್ರ ಗೊತ್ತಾಗಿದೆ.
ನೌಕರ ಕೈ ಚೀಲ ಹಿಡಿದುಕೊಂಡು ಹೋಗುವುದು ಸಿಸಿಟಿವಿಯಲ್ಲಿ ಪತ್ತೆಯಾದ ಬೆನ್ನಲ್ಲೇ ವಿಧಾನಸೌಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: 2ನೇ ಮದುವೆಗೆ ರೆಡಿ ಆಗಿದ್ದ ವರನಿಗೆ ಶಾಕ್ – ಮದುಮಗಳಿಂದಲೇ ದಾಖಲಾಯ್ತು ದೂರು

