ಟೆಲ್ ಅವಿವ್: ಇಸ್ರೇಲ್ (Israel) ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ (Hamas Attack) 300ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಇಸ್ರೇಲ್ ಸೇನೆ ನಡೆಸಿದ ಪ್ರತಿ ದಾಳಿಯಲ್ಲಿ 230ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಉಗ್ರರ ದಾಳಿಯ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕರಾಳ ದಿನ ಎಂದು ಘೋಷಿಸಿದ್ದಾರೆ. ಬಳಿಕ ಉಗ್ರರ ಮೇಲೆ ಯುದ್ಧ ಘೋಷಿಸಲಾಗಿದ್ದು, ದೇಶದಲ್ಲಿ ತರ್ತು ಪರಿಸ್ಥಿತಿ ಜಾರಿ ಮಾಡಲಾಗಿದೆ. ಅಲ್ಲದೇ ಉಗ್ರರ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್, ಪ್ಯಾಲೆಸ್ಟೈನ್ ಮಧ್ಯೆ ಕಾದಾಟ ಯಾಕೆ? 6 ದಿನ ನಡೆದ ಯುದ್ಧದಲ್ಲಿ ಏನಾಯ್ತು? – ಇಲ್ಲಿದೆ ಪೂರ್ಣ ಮಾಹಿತಿ
Advertisement
ಹಮಾಸ್ ಉಗ್ರರು 5ಂಕ್ಕೂ ಹೆಚ್ಚು ಇಸ್ರೇಲ್ ಸೈನಿಕರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದೆ. ಅಲ್ಲದೇ ದೇಶದ ಒಳಗೆ ನುಗ್ಗಿ ಪ್ರಮುಖ ನಗರಗಳ ಮೇಲೆ ದಾಳಿ ನಡೆಸಿ ಸಾರ್ವಜನಿಕರ ಕಗ್ಗೊಲೆ ಮಾಡುತ್ತಿದ್ದಾರೆ. ಅವರ ವಿರುದ್ಧ ಸೇನೆ ಹೋರಾಡುತ್ತಿದೆ ಎಂದು ಸೇನಾ ವಕ್ತಾರ ರಿಚರ್ಡ್ ಹೆಚ್ಟ್ ಹೇಳಿದ್ದಾರೆ.
Advertisement
Advertisement
ಯುದ್ಧ ಘೋಷಣೆಯ ಬಳಿಕ ಇಸ್ರೇಲ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರನ್ನು ಜಾಗರೂಕರಾಗಿರುವಂತೆ ಎಚ್ಚರಿಸಿದೆ. ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದೆ. ಅನಗತ್ಯವಾಗಿ ಮನೆಯಿಂದ ಹೊರಗೆ ಬರದಿರುವಂತೆ ಸಲಹೆ ನೀಡಲಾಗಿದೆ.
Advertisement
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಇಸ್ರೇಲ್‍ಗೆ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಸಭೆ ಕರೆದು ಇದು ಇಸ್ರೇಲ್ ಮೇಲಿನ ಅತಿ ದೊಡ್ಡ ಆಕ್ರಮಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹಮಾಸ್ ಉಗ್ರರ ನಾಯಕ ಒಸಾಮಾ ಹಮ್ದಾನ್ ಪ್ರತಿಕ್ರಿಯಿಸಿ, ಇಸ್ರೇಲ್‍ನ ಬೇಡಿಕೆಗಳನ್ನು ಒಪ್ಪಿಕೊಳ್ಳುವುದು ಶಾಂತಿಯನ್ನು ತರುವುದಿಲ್ಲ ಎಂದು ಅರಬ್ ರಾಷ್ಟ್ರಗಳು ಅರಿತುಕೊಳ್ಳಬೇಕು. ಪ್ಯಾಲೆಸ್ಟೈನ್‍ನ (Palestine) ಸ್ಥಿರತೆ ಮತ್ತು ಶಾಂತಿಯನ್ನು ತರಲು ಇಸ್ರೇಲ್ ಆಕ್ರಮಣವನ್ನು ಕೊನೆಗೊಳಿಸುವುದು ಆರಂಭಿಕ ಹಂತವಾಗಿರಬೇಕು ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ಕಷ್ಟದ ಸಮಯದಲ್ಲಿ ಇಸ್ರೇಲ್ ಪರ ಒಗ್ಗಟ್ಟಿನಿಂದ ನಿಲ್ಲುತ್ತೇವೆ: ನರೇಂದ್ರ ಮೋದಿ
Web Stories