ನವದೆಹಲಿ: ಜಿ20 ಶೃಂಗಸಭೆಗೆ (G20 Summit) ನಿಗಧಿಗಿಂತ 300 ಪಟ್ಟು ಅಧಿಕ ಹಣ ಖರ್ಚು ಮಾಡಿರುವ ಆರೋಪವನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ. ಪಿಐಬಿ ಮೂಲಕ ಸ್ಪಷ್ಟನೆ ನೀಡಿರುವ ಸರ್ಕಾರ ಜಿ20 ಶೃಂಗಸಭೆಯನ್ನು ಆಯೋಜಿಸುವುದಕ್ಕೆ ಖರ್ಚು ಸೀಮಿತವಾಗಿರದೇ ಮುಖ್ಯವಾಗಿ ಶಾಶ್ವತ ಆಸ್ತಿ ನಿರ್ಮಾಣಕ್ಕೆ ಖರ್ಚು ಮಾಡಲಾಗಿದೆ ಎಂದು ಹೇಳಿದೆ.
ಜಿ20 ಸಭೆಗೆ ಬಜೆಟ್‌ನಲ್ಲಿ (Budget) 990 ಕೋಟಿ ರೂ. ಮೀಸಲಿಡಲಾಗಿತ್ತು. ಆದರೆ ಸರ್ಕಾರ 300% ಅಧಿಕ ಅಂದರೆ 4,100 ಕೋಟಿ ರೂ.ವರೆಗೆ ಖರ್ಚು ಮಾಡಿದೆ ಎಂದು ಮಮತಾ ಬ್ಯಾನರ್ಜಿ (Mamata Banerjee) ಪಕ್ಷದ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ (Saket Gokhale) ಪ್ರತಿಪಾದಿಸಿದ್ದರು. 2024ರ ಚುನಾವಣೆಗೂ ಮುನ್ನ ಮೋದಿಯವರ (Narendra Modi) ಸ್ವಯಂ ಜಾಹೀರಾತಿಗಾಗಿ 3,110 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಇದನ್ನು ಬಿಜೆಪಿ ಯಾಕೆ ಭರಿಸಬಾರದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸನಾತನ ಧರ್ಮದ ತತ್ವಗಳ ವಿರುದ್ಧ ಹೋರಾಡಲು INDIA ಒಕ್ಕೂಟ ರಚಿಸಿದೆ: ಡಿಎಂಕೆ ನಾಯಕ ಪೊನ್ಮುಡಿ ವಿವಾದಾತ್ಮಕ ಹೇಳಿಕೆ
ಇದಕ್ಕೆ ಸ್ಪಷ್ಟನೆ ನೀಡಿದ ಸರ್ಕಾರ, ಇಂತಹ ಹೇಳಿಕೆಗಳು ತಪ್ಪುದಾರಿಗೆಳೆಯುವಂತಿವೆ ಎಂದು ಹೇಳಿದೆ. ಪ್ರಗತಿ ಮೈದಾನದಲ್ಲಿ ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ (ITPO) ಮತ್ತು ಇತರ ಮೂಲಸೌಕರ್ಯ ಅಭಿವೃದ್ಧಿಯಿಂದ ಶಾಶ್ವತ ಆಸ್ತಿ ಸೃಷ್ಟಿಗೆ ಈ ಮೊತ್ತವನ್ನು ಖರ್ಚು ಮಾಡಲಾಗಿದೆ. ಇದು ಕೇವಲ ಜಿ20 ಶೃಂಗಸಭೆಯನ್ನು ಆಯೋಜಿಸಲು ಸೀಮಿತವಾಗಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ ಸಿಬ್ಬಂದಿಗೆ ನೂತನ ಡ್ರೆಸ್ ಕೋಡ್
ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆಯು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ಪ್ರದರ್ಶನ-ಕನ್ವೆನ್ಷನ್ ಸೆಂಟರ್ (IECC) ಪ್ರಗತಿ ಮೈದಾನದಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ನಡೆಯಿತು. 20 ಸದಸ್ಯ ರಾಷ್ಟ್ರಗಳು, ಒಂಭತ್ತು ಅತಿಥಿ ದೇಶಗಳು ಮತ್ತು ಹಲವು ಅಂತರಾಷ್ಟ್ರೀಯ ಸಂಸ್ಥೆಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವು. ಇದನ್ನೂ ಓದಿ: ಔತಣಕೂಟಕ್ಕೆ ದೀದಿ ಹೋಗಿದ್ದಕ್ಕೆ ಕಾಂಗ್ರೆಸ್ ತಗಾದೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]