ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 306 ಪಾಸಿಟಿವ್ ಕೇಸ್ ಪತ್ತೆಯಾಗಿದೆ. 2 ಮರಣ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಶೂನ್ಯ ಮರಣ ಪ್ರಕರಣ ದಾಖಲಾಗಿದ್ದು, 171 ಮಂದಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.
ರಾಜ್ಯದಲ್ಲಿ 224 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,492 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,94,561 ಮಂದಿಗೆ ಕೊರೊನಾ ಬಂದಿದೆ. 29,49,853 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.65 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.36 ರಷ್ಟಿದೆ. ಇಂದು ದಾಖಲಾದ ಎರಡು ಮರಣ ಪ್ರಕರಣ ಕಲಬುರಗಿ ಮತ್ತು ಕೋಲಾರ ಜಿಲ್ಲೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ: ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು
ಇಂದು ರಾಜ್ಯದಲ್ಲಿ ಒಟ್ಟು 2,18,067 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 84,513 ಸ್ಯಾಂಪಲ್ (ಆರ್ಟಿ ಪಿಸಿಆರ್ 68,227 + 16,286 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮೈತ್ರಿ ಸರ್ಕಾರದಲ್ಲಿ ಕಡಿಮೆಯಾಗಿದ್ದ ಆತ್ಮಹತ್ಯೆ ಪ್ರಕರಣಗಳು ಈಗ ಹೆಚ್ಚಾಗ್ತಿವೆ: ಹೆಚ್ಡಿಕೆ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 171, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 2, ಚಿತ್ರದುರ್ಗ 6, ದಕ್ಷಿಣ ಕನ್ನಡ 13, ದಾವಣಗೆರೆ 1, ಧಾರವಾಡ 42, ಗದಗ 0, ಹಾಸನ 5, ಹಾವೇರಿ 1, ಕಲಬುರಗಿ 0, ಕೊಡಗು 4, ಕೋಲಾರ 2, ಕೊಪ್ಪಳ 0, ಮಂಡ್ಯ 3, ಮೈಸೂರು 20, ರಾಯಚೂರು 0, ರಾಮನಗರ 1, ಶಿವಮೊಗ್ಗ 3, ತುಮಕೂರು 8, ಉಡುಪಿ 13, ಉತ್ತರ ಕನ್ನಡ 1, ವಿಜಯಪುರ 0, ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.