ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 303 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ. ಒಟ್ಟು 322 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಬೆಂಗಳೂರಿನಲ್ಲಿ ಇಂದು 197 ಕೇಸ್ ಪತ್ತೆಯಾಗಿದೆ.
Advertisement
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,158 ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 30,01,554 ಮಂದಿಗೆ ಕೊರೊನಾ ಬಂದಿದೆ. 29,56,088 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ದಾಖಲಾದ ಎರಡು ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದೆ. ಕೋವಿಡ್-19 ಮರಣ ಪ್ರಮಾಣ ಶೇ.0.66 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.23 ರಷ್ಟಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಶುಭ ಸುದ್ದಿ, ಎಥೆನಾಲ್ ನೀತಿ ಜಾರಿಗೆ ನಿರ್ಣಯ: ಮುನೇನಕೊಪ್ಪ
Advertisement
Advertisement
ರಾಜ್ಯದಲ್ಲಿ ಇಂದು ಒಟ್ಟು 2,18,112 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,29,411 ಸ್ಯಾಂಪಲ್ (ಆರ್ಟಿಪಿಸಿಆರ್ 1,08,668 + 20,743 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೇಡೌನ್ ಮೇಲೆ ಅಧಿಕಾರಿಗಳ ದಾಳಿ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 197, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 6, ಚಿತ್ರದುರ್ಗ 1, ದಕ್ಷಿಣ ಕನ್ನಡ 15, ದಾವಣಗೆರೆ 0, ಧಾರವಾಡ 4, ಗದಗ 1, ಹಾಸನ 7, ಹಾವೇರಿ 0, ಕಲಬುರಗಿ 0, ಕೊಡಗು 13, ಕೋಲಾರ 1, ಕೊಪ್ಪಳ 0, ಮಂಡ್ಯ 3, ಮೈಸೂರು 21, ರಾಯಚೂರು 3, ರಾಮನಗರ 0, ಶಿವಮೊಗ್ಗ 6, ತುಮಕೂರು 6, ಉಡುಪಿ 3, ಉತ್ತರ ಕನ್ನಡ 9, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.